ಶಾಂಘೈ ಸಹಕಾರ ಸಂಸ್ಥೆ ಸಭೆ (ಸಂಗ್ರಹ ಚಿತ್ರ) 
ದೇಶ

ಶಾಂಘೈ ಸಹಕಾರ ಸಂಸ್ಥೆ ಸಭೆ: ಪಾಕಿಸ್ತಾನ, ಚೀನಾಗೆ ಭಾರತ ಆಹ್ವಾನ!

ಮಹತ್ವದ ಬೆಳವಣಿಗೆಯಲ್ಲಿ ಭಾರತದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ ಸಭೆಗೆ ಭಾರತ ಸರ್ಕಾರ ಪಾಕಿಸ್ತಾನ ಮತ್ತು ಚೀನಾ ದೇಶಗಳಿಗೆ ಆಹ್ವಾನ ನೀಡಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಭಾರತದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ ಸಭೆಗೆ ಭಾರತ ಸರ್ಕಾರ ಪಾಕಿಸ್ತಾನ ಮತ್ತು ಚೀನಾ ದೇಶಗಳಿಗೆ ಆಹ್ವಾನ ನೀಡಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಇದೇ ಮೇ ತಿಂಗಳಿನಲ್ಲಿ ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ಉನ್ನತ ಮಟ್ಟದ ಸಭೆಗೆ ಭಾರತವು ಪಾಕಿಸ್ತಾನ ಹಾಗೂ ಚೀನಾಗೆ ಆಹ್ವಾನ ನೀಡಿದೆ. ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಜರ್ದಾರಿ ಹಾಗೂ ಚೀನಾದ ವಿದೇಶಾಂಗ ಮಂತ್ರಿ ಕ್ವಿನ್‌ ಗ್ಯಾಂಗ್‌ ಅವರನ್ನು ಭಾರತ ಅಹ್ವಾನಿಸಿದೆ ಎಂದು ತಿಳಿದುಬಂದಿದೆ.

ಈ ಸಭೆಯಲ್ಲಿ ಭಾಗಿಯಾಗುವುದರ ಬಗ್ಗೆ ಪಾಕಿಸ್ತಾನದಿಂದ ಯಾವುದೇ ಉತ್ತರ ಬಂದಿಲ್ಲ. ಸಂಸ್ಥೆಯ ರೀತಿ ರಿವಾಜುಗಳಿಗೆ ಅನುಗುಣವಾಗಿ ಆಹ್ವಾನ ನೀಡಲಾಗಿದೆ. ಒಂದು ವೇಳೆ ಬಿಲಾವಲ್ ಅವರು ಈ ಸಭೆಗೆ ಬಂದಿದ್ದೇ ಆದಲ್ಲಿ, 2011ರ ಬಳಿಕ ಭಾರತಕ್ಕೆ ಭೇಟಿ ನೀಡಿದ ಪಾಕಿಸ್ತಾನದ ಮೊದಲ ವಿದೇಶಾಂಗ ಮಂತ್ರಿ ಎನಿಸಿಕೊಳ್ಳಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಮಾಹಿತಿ ಮತ್ತು ಪ್ರಸಾರ ಖಾತೆ ಕಾರ್ಯದರ್ಶಿ ನೀರ್ಜಾ ಶೇಖರ್ ಅವರು, ಒಂದೇ ಒಂದು SCO ಸದಸ್ಯ ರಾಷ್ಟ್ರವಿದ್ದು, ಅದರಲ್ಲಿ ನಮೂದುಗಳನ್ನು ಸ್ವೀಕರಿಸಲಾಗಿಲ್ಲ, ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ತಿಳಿಸಿದ್ದಾರೆ.

ಮಾರ್ಚ್‌ನಲ್ಲಿ ಈ ರಾಷ್ಟ್ರಗಳ ಮುಖ್ಯನ್ಯಾಯಮೂರ್ತಿಗಳ ಸಭೆಯೂ ಇದ್ದು, ಅದಕ್ಕೂ ಕೂಡ ಆಹ್ವಾನ ನೀಡಿ ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿಗಳ ಕಚೇರಿಗೆ ಪತ್ರಿಕೆ ಕಳಿಸಲಾಗಿದೆ.

ಶಾಂಘೈ ಸಹಕಾರ ಸಂಸ್ಥೆಯು 8 ರಾಷ್ಟ್ರಗಳ ಒಕ್ಕೂಟವಾಗಿದ್ದು, ಈ ಬಾರಿ ಭಾರತಕ್ಕೆ ಅಧ್ಯಕ್ಷತೆ ಲಭಿಸಿದೆ. ಮೇ ತಿಂಗಳ ಮೊದಲ ವಾರದಲ್ಲಿ ಈ ಸಭೆ ನಡೆಯಲಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT