ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ವಿಶ್ವದ ಮೊದಲ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಬಿಡುಗಡೆ

ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಅನ್ನು ಗುರುವಾರ ಭಾರತ್ ಬಯೋಟೆಕ್‌ ಸಂಸ್ಥೆ ಬಿಡುಗಡೆ ಮಾಡಿದೆ.

ಇನ್ಕೋವ್ಯಾಕ್ ಕೋವಿಡ್ ಲಸಿಕೆ
Srinivasa Murthy VN
Updated On : 26 Jan 2023, 5:04 pm

ನವದೆಹಲಿ: ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಅನ್ನು ಗುರುವಾರ ಭಾರತ್ ಬಯೋಟೆಕ್‌ ಸಂಸ್ಥೆ ಬಿಡುಗಡೆ ಮಾಡಿದೆ.

ಭಾರತದಲ್ಲೇ ತಯಾರಿಸಲಾದ ಭಾರತ್ ಬಯೋಟೆಕ್‌ನ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ( iNCOVACC) ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಬಿಡುಗಡೆ ಮಾಡಿದರು. 

ಇದನ್ನೂ ಓದಿ: ಸೆರಮ್ ಇನ್‌ಸ್ಟಿಟ್ಯೂಟ್ ನಿಂದ ಸರ್ವಿಕಲ್ ಕ್ಯಾನ್ಸರ್ ಎಚ್‌ಪಿವಿ ಲಸಿಕೆ ಸರ್ವವಾಕ್ ಬಿಡುಗಡೆ!

Advertisement

Advertisement

ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ (Mansukh Mandaviya) ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಇಂದು (ಗುರುವಾರ) ಮೊದಲ ಕೋವಿಡ್ ಇಂಟ್ರಾನಾಸಲ್ ಲಸಿಕೆ (ಮೂಗಿನ ಮೂಲಕ ಹಾಕುವ ಲಸಿಕೆ) ಇನ್ಕೋವ್ಯಾಕ್ ( iNCOVACC ) ಬಿಡುಗಡೆ ಮಾಡಿದರು.

ಭಾರತದ ಭಾರತ್ ಬಯೋಟೆಕ್ (Bharat Biotech) ಅಭಿವೃದ್ಧಿಪಡಿಸಿರುವ ಈ ಲಸಿಕೆ ಪ್ರತಿ ಡೋಸ್‌ಗೆ 325 ರೂಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಇದರ ದರ 800 ರೂ ಆಗಿದೆ. ಭಾರತ್ ಬಯೋಟೆಕ್ ಡಿಸೆಂಬರ್ 2022ರಲ್ಲಿ, ಪ್ರಾಥಮಿಕ 2-ಡೋಸ್ ಶೆಡ್ಯೂಲ್ ಮತ್ತು ಭಿನ್ನಜಾತಿಯ ಬೂಸ್ಟರ್ ಡೋಸ್‌ಗೆ ಅನುಮೋದನೆಯನ್ನು ಪಡೆದುಕೊಂಡಿದೆ. ಅದಕ್ಕೂ ಮೊದಲು, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) 18 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ತುರ್ತು ಸಂದರ್ಭಗಳಲ್ಲಿ ಇಂಟ್ರಾನಾಸಲ್ ಲಸಿಕೆಯ ನಿರ್ಬಂಧಿತ ಬಳಕೆಯನ್ನು ಅನುಮೋದಿಸಿತ್ತು.

ಇದನ್ನೂ ಓದಿ: ಉಕ್ರೇನ್‌ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲು ಆರು ವಾರಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಲಸಿಕೆಯ ಎರಡು ಡೋಸ್‌ಗಳನ್ನು 28 ದಿನಗಳ ಅಂತರದಲ್ಲಿ ನೀಡಬೇಕು. ಬೂಸ್ಟರ್ ಡೋಸ್ ತೆಗೆದುಕೊಂಡವರಿಗೆ ಮೂಗಿನ ಲಸಿಕೆಯನ್ನು ನೀಡಲಾಗುವುದಿಲ್ಲ ಎಂದು ದೇಶದ ಲಸಿಕೆ ಕಾರ್ಯಪಡೆಯ ಮುಖ್ಯಸ್ಥರು ಕಳೆದ ತಿಂಗಳು ತಿಳಿಸಿದ್ದರು.

CoWinನಲ್ಲೂ ಲಭ್ಯ
ಲಸಿಕೆ ತಯಾರಕ ಭಾರತ್ ಬಯೋಟೆಕ್ ಪ್ರಕಾರ, CoWin ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಇಂಟ್ರಾನಾಸಲ್ ಲಸಿಕೆ ಡೋಸ್‌ಗೆ ಅಪಾಯಿಂಟ್‌ಮೆಂಟ್ ಕಾಯ್ದಿರಿಸಬಹುದು. 

ಇದನ್ನೂ ಓದಿ: ಕೋವಿಡ್-19 ಎರಡನೇ ಅಲೆಯ ನೈಜ ಕಥೆ ಆಧರಿಸಿದ ಚಿತ್ರದಲ್ಲಿ ರಿಚಾ ಚಡ್ಡಾ ನಟನೆ

iNCOVACC ಅನ್ನು ವಾಷಿಂಗ್ಟನ್ ಯೂನಿವರ್ಸಿಟಿ, ಸೇಂಟ್ ಲೂಯಿಸ್ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಪೂರ್ವಭಾವಿ ಸುರಕ್ಷತಾ ಮೌಲ್ಯಮಾಪನಕ್ಕೆ ಸಂಬಂಧಿಸಿದ ಉತ್ಪನ್ನ ಅಭಿವೃದ್ಧಿ, ಬೃಹತ್-ಪ್ರಮಾಣದ ಉತ್ಪಾದನಾ ಪ್ರಮಾಣ, ಸೂತ್ರೀಕರಣ ಮತ್ತು ವಿತರಣಾ ಸಾಧನ ಅಭಿವೃದ್ಧಿ, ಮಾನವ ಕ್ಲಿನಿಕಲ್ ಪ್ರಯೋಗಗಳನ್ನು ಭಾರತ್ ಬಯೋಟೆಕ್ ನಡೆಸಿದೆ. ಉತ್ಪನ್ನ ಅಭಿವೃದ್ಧಿ ಮತ್ತು ಕ್ಲಿನಿಕಲ್ ಪ್ರಯೋಗಗಳಿಗೆ ಭಾರತ ಸರ್ಕಾರವು ಜೈವಿಕ ತಂತ್ರಜ್ಞಾನ ಇಲಾಖೆಯ ಕೋವಿಡ್ ಸುರಕ್ಷಾ ಕಾರ್ಯಕ್ರಮದ ಮೂಲಕ ಭಾಗಶಃ ಹಣವನ್ನು ನೀಡಿತು ಎನ್ನಲಾಗಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments