ಕೋಲ್ಕತ್ತಾದ ಜಾದವ್ ಪುರ ವಿಶ್ವವಿದ್ಯಾಲಯದಲ್ಲಿ ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶನ 
ದೇಶ

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಲು ಯೋಜನೆ: ದೆಹಲಿ ವಿಶ್ವವಿದ್ಯಾಲಯದ 24 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ 

2002 ರ ಗೋಧ್ರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಬಿಬಿಸಿ ತಯಾರಿಸಿರುವ ವಿವಾದಿತ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯೋಜನೆ ರೂಪಿಸಿದ ಆರೋಪದಡಿ ದೆಹಲಿ ಪೊಲೀಸರು ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದ 24 ವಿದ್ಯಾರ್ಥಿಗಳನ್ನು  ವಶಕ್ಕೆ ಪಡೆದಿದ್ದಾರೆ. 

ನವದೆಹಲಿ: 2002 ರ ಗೋಧ್ರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಬಿಬಿಸಿ ತಯಾರಿಸಿರುವ ವಿವಾದಿತ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯೋಜನೆ ರೂಪಿಸಿದ ಆರೋಪದಡಿ ದೆಹಲಿ ಪೊಲೀಸರು ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದ 24 ವಿದ್ಯಾರ್ಥಿಗಳನ್ನು ಇಂದು (ಜ.27) ರಂದು ವಶಕ್ಕೆ ಪಡೆದಿದ್ದಾರೆ. 

ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ. ಜೆಎನ್ ಯು ಹಾಗೂ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿವಿಗಳಲ್ಲಿ ವಿವಾದಿತ ಸಾಕ್ಷ್ಯಚಿತ್ರ ಪ್ರದರ್ಶನದ ವಿಷಯವಾಗಿ ಗಲಾಟೆ ಉಂಟಾಗಿತ್ತು. ಈ ಬೆನ್ನಲ್ಲೇ ದೆಹಲಿ ವಿವಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಬೆಳವಣಿಗೆ ನಡೆದಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ 13 ವಿದ್ಯಾರ್ಥಿಗಳ ಬಂಧನ
 
ಉತ್ತರ ವಿಭಾಗದ ಉಪ ಆಯುಕ್ತ ಸಾಗರ್ ಸಿಂಗ್ ಕಲ್ಸಿ ಮಾತನಾಡಿ, ಸಂಜೆ 4 ಗಂಟೆ ವೇಳೆಗೆ 20 ಮಂದಿ ಕಲಾ ವಿಭಾಗದಿಂದ ಹೊರಬಂದು ನಿರ್ಬಂಧಿಸಿರುವ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯತ್ನಿಸಿದರು. ಈ ನಡೆ ಶಾಂತಿ ಹಾಗೂ ಪ್ರಶಾಂತ ವಾತಾವರಣ ಕದಡುವ ಸಾಧ್ಯತೆ ಇರುವುದರಿಂದ ಅವರನ್ನು ಅಲ್ಲಿಂದ ತೆರಳುವಂತೆ ಹೇಳಲಾಯಿತು. ಆದರೆ ಅವರು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಶಾಂತಿಯುತವಾಗಿ ವಶಕ್ಕೆ ಪಡೆಯಲಾಯಿತು ಎಂದು ಹೇಳಿದ್ದಾರೆ. ಒಟ್ಟು 24 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್