ಸಾಂದರ್ಭಿಕ ಚಿತ್ರ 
ದೇಶ

ದೇಶದ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ 2,967 ಹುಲಿಗಳಿವೆ: ಸುಪ್ರೀಂಗೆ ಕೇಂದ್ರ ಮಾಹಿತಿ

2018ರ ವರದಿಯ ಪ್ರಕಾರ ದೇಶದ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 2,967 ಹುಲಿಗಳಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ನವದೆಹಲಿ: 2018ರ ವರದಿಯ ಪ್ರಕಾರ ದೇಶದ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 2,967 ಹುಲಿಗಳಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ದೇಶದಲ್ಲಿ ಹುಲಿಗಳ ಸಂಖ್ಯೆ ಕ್ಷೀಣಿಸುತ್ತಿದ್ದು, ಅಳಿವಿನಂಚಿನಲ್ಲಿರುವ ಹುಲಿಗಳನ್ನು ಉಳಿಸುವಂತೆ ಕೋರಿ 2017ರಲ್ಲಿ ವಕೀಲ ಅನುಪಮ್ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠಕ್ಕೆ ಈ ಮಾಹಿತಿ ನೀಡಿದರು.

ದೇಶದಲ್ಲಿ ಹುಲಿಗಳ ಸಂರಕ್ಷಣೆ ಮತ್ತು ಅವುಗಳ ಜನಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಸಾಕಷ್ಟು ಕೆಲಸ ಮಾಡಿದೆ ಎಂದು ಭಾಟಿ ಅವರು ತಿಳಿಸಿದರು.

"2018 ರ ಹುಲಿ ಗಣತಿಯ ಪ್ರಕಾರ, ಭಾರತದ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ 2,967 ಹುಲಿಗಳಿದ್ದು, ಈ ಸಂಖ್ಯೆಯು ಜಾಗತಿಕ ಸಂಖ್ಯೆಯ ಶೇಕಡಾ 70 ರಷ್ಟಿದೆ ಮತ್ತು ಅಂಕಿಅಂಶಗಳು ಹುಲಿಗಳ ಬೆಳವಣಿಗೆಯನ್ನು ಸೂಚಿಸುತ್ತವೆ ಎಂದು ಎಎಸ್‌ಜಿ ಐಶ್ವರ್ಯಾ ಭಾಟಿ ಹೇಳಿದರು.

ಅರ್ಜಿದಾರ ಅನುಪಮ್ ತ್ರಿಪಾಠಿ ಅವರು ವಿಚಾರಣೆಗೆ ಗೈರುಹಾಜರಾಗಿದ್ದರಿಂದ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಮಾರ್ಚ್‌ 3ಕ್ಕೆ ಮುಂದೂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ