ಆಶಿಶ್ ಮಿಶ್ರಾ 
ದೇಶ

ಲಖಿಂಪುರ-ಖೇರಿ ಪ್ರಕರಣ: ಆರೋಪಿ ಆಶಿಶ್ ಮಿಶ್ರಾ ಜೈಲಿನಿಂದ ಬಿಡುಗಡೆ- ವಿಡಿಯೋ 

ಉತ್ತರ ಪ್ರದೇಶದ ಲಖಿಂಪುರ-ಖೇರಿ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಶುಕ್ರವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಲಕ್ಕಿಂಪುರ: ಉತ್ತರ ಪ್ರದೇಶದ ಲಖಿಂಪುರ-ಖೇರಿ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಶುಕ್ರವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೈಲಿನ ಮುಖ್ಯ ದ್ವಾರದ ಬದಲು ಪಕ್ಕದ ಮಾರ್ಗದಿಂದ ರಹಸ್ಯವಾಗಿ ಆಶಿಶ್ ಮಿಶ್ರಾ ಜೈಲಿನ ಹೊರಗೆ ಬಂದಿದ್ದು,  ಕಾರು ಹತ್ತಿ ತನ್ನ ನಿವಾಸಕ್ಕೆ ತಲುಪಿದ್ದಾನೆ. ಆತ ಆಗಮನದ ನಂತರ ಮನೆಯ ಗೇಟ್ ಬಂದ್ ಆಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆ ರದ್ದಿಗೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದವರ ಮೇಲೆ 2021ರ ಅಕ್ಟೋಬರ್ ನಲ್ಲಿ ಕಾರು ಹರಿಸಿ, ನಾಲ್ವರು ರೈತರು ಸೇರಿ ಒಟ್ಟು 8 ಮಂದಿಯನ್ನು ಹತ್ಯೆ ಮಾಡಿದ ಆರೋಪ ಆಶಿಶ್ ಮೇಲಿದೆ. ಪ್ರಕರಣ ಸಂಬಂಧ  ಲಖನೌ ಪೀಠದ ಅಲಹಾಬಾದ್ ಹೈಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಆದರೆ, ಸುಪ್ರೀಂ ನಿರ್ದೇಶನದ ಅನ್ವಯ ಮತ್ತೆ ವಿಚಾರಣೆ ನಡೆಸಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿದ ಆಶಿಶ್ ಮಿಶ್ರಾಗೆ ಸುಪ್ರೀಂಕೋರ್ಟ್ 4 ವಾರಗಳ ಷರತ್ತುಬದ್ಧ  ಜಾಮೀನು ಮಂಜೂರು ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT