ಕ್ಯಾ.ಅಮರಿಂದರ್ ಸಿಂಗ್ 
ದೇಶ

ಸಂಸತ್ತಿನ ಬಜೆಟ್ ಅಧಿವೇಶನ ನಂತರ ಮಹಾರಾಷ್ಟ್ರ ರಾಜ್ಯಪಾಲರಾಗಿ ಕೊಶ್ಯಾರಿ ಸ್ಥಾನಕ್ಕೆ ಕ್ಯಾ.ಅಮರಿಂದರ್ ಸಿಂಗ್?

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ಸ್ಥಾನಕ್ಕೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ನೇಮಕವಾಗುವ ಸಾಧ್ಯತೆಯಿದೆ ಎಂಬ ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ. ಈ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದು ಪಟಿಯಾಲಾ ರಾಜಮನೆತನದ ನಿಕಟ ಮೂಲಗಳು ತಿಳಿಸಿವೆ. 

ಚಂಡೀಗಢ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ಸ್ಥಾನಕ್ಕೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ನೇಮಕವಾಗುವ ಸಾಧ್ಯತೆಯಿದೆ ಎಂಬ ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ. ಈ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದು ಪಟಿಯಾಲಾ ರಾಜಮನೆತನದ ನಿಕಟ ಮೂಲಗಳು ತಿಳಿಸಿವೆ. 

ಸಂಸತ್ತಿನ ಬಜೆಟ್ ಅಧಿವೇಶನದ ನಂತರ ಶೀಘ್ರದಲ್ಲೇ ಅಥವಾ ಯಾವುದೇ ಸಮಯದಲ್ಲಿ ಮಹಾರಾಷ್ಟ್ರ ರಾಜ್ಯಪಾಲರ ಬದಲಾವಣೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರ ಅಲ್ಲದಿದ್ದರೆ ಅವರು ಪಶ್ಚಿಮ ಬಂಗಾಳ ಅಥವಾ ತಮಿಳುನಾಡಿನ ರಾಜ್ಯಪಾಲರಾಗಬಹುದು ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ. 

ಈ ಹಿಂದೆಯೂ ಅಮರಿಂದರ್ ಅವರನ್ನು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಅಥವಾ ಉಪರಾಷ್ಟ್ರಪತಿಯಾಗಿ ನೇಮಿಸಲಾಗುತ್ತದೆ ಎಂಬ ಬಗ್ಗೆ ವದಂತಿಗಳಿದ್ದವು. ಸರಿಸುಮಾರು ಎರಡು ಅವಧಿಗೆ ಪಂಜಾಬ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅಮರಿಂದರ್ ಸಿಂಗ್ - ಮೊದಲು 2002 ರಿಂದ 2007 ರವರೆಗೆ ಮತ್ತು ನಂತರ 2017 ರಿಂದ ಕಳೆದ ವರ್ಷದ ಆರಂಭದಲ್ಲಿ ಪಂಜಾಬ್ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಅವರನ್ನು ಹುದ್ದೆಯಿಂದ ಅನಧಿಕೃತವಾಗಿ ತೆಗೆದುಹಾಕಲಾಯಿತು. ಅವರು ಅಕ್ಟೋಬರ್ 2021 ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ನಂತರ ತಮ್ಮದೇ ರಾಜಕೀಯ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ ನ್ನು ರಚಿಸಿದರು, ನಂತರ ಅವರು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೇಸರಿ ಪಕ್ಷಕ್ಕೆ ಸೇರಿದಾಗ ಬಿಜೆಪಿಯೊಂದಿಗೆ ತಮ್ಮ ಪಕ್ಷವನ್ನು ವಿಲೀನಗೊಳಿಸಿದರು.

2019 ರ ಸೆಪ್ಟೆಂಬರ್‌ನಲ್ಲಿ ಮಹಾರಾಷ್ಟ್ರ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ಕೋಶ್ಯಾರಿ ಅವರು ರಾಜೀನಾಮೆ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮುಂಬೈಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಪ್ರಧಾನಿಗೆ ಈ ವಿಷಯ ತಿಳಿಸಿದ್ದಾರೆ. ಓದು, ಬರವಣಿಗೆ ಮತ್ತು ಇತರ ಆಸಕ್ತಿಕರ ಚಟುವಟಿಕೆಗಳಲ್ಲಿ ತಮ್ಮ ಉಳಿದ ಜೀವನವನ್ನು ಕಳೆಯಲು ಬಯಸುತ್ತಿರುವ ಕಾರಣ ಹುದ್ದೆಯನ್ನು ತೊರೆಯುವ ಇಂಗಿತ ವ್ಯಕ್ತಪಡಿಸಿದ್ದರು. 

ಒಮ್ಮೆ ಉತ್ತರಾಖಂಡದ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ ಮಹಾರಾಷ್ಟ್ರ ರಾಜ್ಯಪಾಲರು ದೊಡ್ಡ ವಿವಾದಗಳನ್ನು ಎದುರಿಸಿದ್ದರು. ಮಹಾರಾಷ್ಟ್ರದ ವಿರೋಧ ಪಕ್ಷಗಳು ರಾಜೀನಾಮೆ ನೀಡುವಂತೆ ಕರೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT