ಮಲ್ಲಿಕಾರ್ಜುನ ಖರ್ಗೆ 
ದೇಶ

ಜಮ್ಮು-ಕಾಶ್ಮೀರದಲ್ಲಿನ ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸಿ: ಅಮಿತ್ ಶಾಗೆ ಖರ್ಗೆ ಪತ್ರ

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪತ್ರ ಬರೆದಿದ್ದಾರೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪತ್ರ ಬರೆದಿದ್ದಾರೆ.

ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಜಮ್ಮು ಮತ್ತು ಕಾಶ್ಮೀರದ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಕೋರಿದೆ, ಭದ್ರತಾ ಲೋಪದ ಹಿನ್ನೆಲೆಯಲ್ಲಿ ಶುಕ್ರವಾರದಂದು ಒಂದು ದಿನದ ಮಟ್ಟಿಗೆ ಭಾರತ್ ಜೋಡೊ ಯಾತ್ರೆಯನ್ನು ರದ್ದು ಮಾಡಲಾಗಿತ್ತು.

ಮುಂದಿನ ಎರಡು ದಿನಗಳಲ್ಲಿ ಹಾಗೂ ಜನವರಿ 30ರಂದು ಶ್ರೀನಗರದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬೃಹತ್ ಸಮಾವೇಶಕ್ಕೆ ಭಾರಿ ಜನಸಂದಣಿಯನ್ನು ನಿರೀಕ್ಷಿಸುತ್ತಿದ್ದೇವೆ. ಕಾಂಗ್ರೆಸ್ ಮತ್ತು ಇತರೆ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುತ್ತಿದ್ದು, ಈ ಸಂದರ್ಭದಲ್ಲಿ ಸೂಕ್ತ ಭದ್ರತೆ ಒದಗಿಸುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

2022 ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆ ಜನವರಿ 30ರಂದು ಶ್ರೀನಗರದಲ್ಲಿ ಅಂತ್ಯಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!