ಒಡಿಶಾ ಆರೋಗ್ಯ ಸಚಿವರಾಗಿದ್ದ ನಬ ದಾಸ್ 
ದೇಶ

ಗುಂಡಿನ ದಾಳಿಗೆ ಗುರಿಯಾಗಿದ್ದ ಒಡಿಶಾ ಸಚಿವ ನಬ ದಾಸ್ ನಿಧನ

ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಗೆ ಗುರಿಯಾಗಿದ್ದ  ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ನಿಧನರಾಗಿದ್ದಾರೆ.

ಭುವನೇಶ್ವರ್: ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಗೆ ಗುರಿಯಾಗಿದ್ದ  ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ನಿಧನರಾಗಿದ್ದಾರೆ.
 
ಒಡಿಶಾದ ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್​ನ ಗಾಂಧಿ ಚಕ ಎಂಬಲ್ಲಿ ಭಾನುವಾರ ಮಧ್ಯಾಹ್ನ 12:30ಕ್ಕೆ ಪೊಲೀಸ್ ಅಧಿಕಾರಿ ಎಎಸ್​ಐ ಗೋಪಾಲ್ ಚಂದ್ರ ದಾಸ್ ಸಚಿವರ ಎದೆಗೆ ಗುಂಡು ಹಾರಿಸಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಚಿಕಿತ್ಸೆ ಫಲಕಾರಿಯಾಗದೇ ಸಚಿವರು ಕೊನೆಯುಸಿರೆಳೆದಿದ್ದಾರೆ.

ನಬ ಕಿಶೋರ್, ಬಿಜು ಪಾಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದಲ್ಲಿ ಪ್ರಬಲ ಸಚಿವರಲ್ಲೊಬ್ಬರಾಗಿದ್ದರು.  ಸಚಿವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಿಂದ ಕೆಳಗಿಳಿಯುವಾಗ ಈ ದಾಳಿ ನಡೆದಿತ್ತು. ನಬ ದಾಸ್ ಅವರ ಎದೆಗೆ ಎರಡು ಗುಂಡುಗಳು ಹೊಕ್ಕಿವೆ. ಗಂಭೀರವಾಗಿ ಗಾಯಗೊಂಡಿದ್ದರು.

ನಬ ಕಿಶೋರ್ ದಾಸ್ ಅವರು ಇತ್ತೀಚೆಗೆ ಮಹಾರಾಷ್ಟ್ರದ ಶನಿ ಶಿಂಗನಾಪುರ ದೇವಸ್ಥಾನಕ್ಕೆ ಒಂದು ಕೋಟಿ ರೂ ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಕಾಣಿಕೆಯಾಗಿ ನೀಡುವ ಮೂಲಕ ಸುದ್ದಿಯಲ್ಲಿದ್ದರು. ಆರೋಪಿ ಗೋಪಾಲ್ ಚಂದ್ರ ದಾಸ್ ನ್ನು ಪೊಲೀಸರು ಬಂಧಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್, ಫ್ಲೈಓವರ್'ಗಳು ಬಂದ್

ಮೇ ತಿಂಗಳ ಭಾರತ-ಪಾಕಿಸ್ತಾನ ಸಂಘರ್ಷ ವೇಳೆ ಮಧ್ಯಸ್ಥಿಕೆ ವಹಿಸಿದ್ದು ನಾವೇ: ಚೀನಾ

ಭಾರತೀಯ ರೈಲ್ವೆ ಇತಿಹಾಸದಲ್ಲಿ ಮಹತ್ತರ ಸಾಧನೆ: ಗಂಟೆಗೆ 180 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್ ; ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್

New Year ಗೆ ಆನ್ ಲೈನ್ ಫುಡ್ ಆರ್ಡರ್ ಗೆ ಸಮಸ್ಯೆ: ಒಕ್ಕೂಟಗಳಿಂದ ಇಂದು ಮೆಗಾ ಪ್ರತಿಭಟನೆ, 1.5 ಲಕ್ಷ ಕಾರ್ಮಿಕರು ಭಾಗಿ

ಮಠಾಧೀಶರ ತೀವ್ರ ಆಕ್ಷೇಪ: ಮಥುರಾದಲ್ಲಿ ಆಯೋಜಿಸಿದ್ದ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದು!

SCROLL FOR NEXT