ಸಚಿವ ನಬ ದಾಸ್ ಮತ್ತು ಗುಂಡುಹಾರಿಸಿದ ಪೊಲೀಸ್ ಸಿಬ್ಬಂದಿ 
ದೇಶ

ಒಡಿಶಾ ಸಚಿವರಿಗೆ ಗುಂಡೇಟು ಹಾರಿಸಿದ ಪೊಲೀಸ್ ಸಿಬ್ಬಂದಿ ಮಾನಸಿಕ ಅಸ್ವಸ್ಥ: ಪತ್ನಿ ಹೇಳಿಕೆ

ಒಡಿಶಾ ಆರೋಗ್ಯ ಸಚಿವ ನಬಾ ದಾಸ್‌ಗೆ ಗುಂಡು ಹಾರಿಸಿದ ಸಹಾಯಕ ಸಬ್ ಇನ್‌ಸೆಕ್ಟರ್ ಗೋಪಾಲ್ ದಾಸ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಅವರ ಪತ್ನಿ ಹೇಳಿದ್ದಾರೆ.

ಭುವನೇಶ್ವರ: ಒಡಿಶಾ ಆರೋಗ್ಯ ಸಚಿವ ನಬಾ ದಾಸ್‌ಗೆ ಗುಂಡು ಹಾರಿಸಿದ ಸಹಾಯಕ ಸಬ್ ಇನ್‌ಸೆಕ್ಟರ್ ಗೋಪಾಲ್ ದಾಸ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಅವರ ಪತ್ನಿ ಹೇಳಿದ್ದಾರೆ.

ಸಹಾಯಕ ಸಬ್ ಇನ್‌ಸೆಕ್ಟರ್ ಗೋಪಾಲ್ ದಾಸ್ ಕಳೆದ ಎಂಟು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ. ಅವರಿಗೆ  ಔಷಧೋಪಚಾರ ಮಾಡುತ್ತಿದ್ದು, ಆರೋಗ್ಯವಾಗಿದ್ದಾರೆ ಎಂದು ಅವರ ಪತ್ನಿ ಜಯಂತಿ ದಾಸ್ ಹೇಳಿದ್ದಾರೆ.

ನಬ ದಾಸ್ ಮೇಲೆ ಗುಂಡು ಹಾರಿಸಿದ ಎಎಸ್‌ಐ ಗೋಪಾಲ್ ದಾಸ್ ಅವರ ಪತ್ನಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ತಮ್ಮ ಪತಿ ಸಚಿವರ ಮೇಲೆ ಗುಂಡು ಹಾರಿಸಿದ ಕಾರಣದ ಬಗ್ಗೆ ನನಗೆ ತಿಳಿದಿಲ್ಲ ಎಂದು ಹೇಳಿದರು.

"ನನ್ನ ಹೆಸರು ಜಯಂತಿ ದಾಸ್. ನಾನು ನಬ ದಾಸ್ ಮೇಲೆ ಗುಂಡು ಹಾರಿಸಿದ ಸುದ್ದಿ ಕೇಳಿದೆ.. ಘಟನೆ ನನಗೂ ಆಘಾತವನ್ನುಂಟು ಮಾಡಿದೆ. ಅವರು ಏಕೆ ಹೀಗೆ ಮಾಡಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ನಾನು ಬೆಳಿಗ್ಗೆಯಿಂದ ಅವರೊಂದಿಗೆ ಮಾತನಾಡಿರಲಿಲ್ಲ. ಅವರು ಸುಮಾರು  ಹೊತ್ತು ನನ್ನ ಮಗಳೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡಿದ್ದಾನೆ. ಬೆಳಿಗ್ಗೆ 11 ಗಂಟೆಗೆ ಇದ್ದಕ್ಕಿದ್ದಂತೆ ಸಂಪರ್ಕ ಕಡಿತಗೊಳಿಸಿದರು. ಅವರ ಮಾನಸಿಕ ಸ್ಥಿತಿ ಚೆನ್ನಾಗಿಲ್ಲ ಮತ್ತು ಅದಕ್ಕಾಗಿ ಅವರು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರು. ಅವರು ಕಳೆದ 8 ವರ್ಷಗಳಿಂದ ಔಷಧಿ ಸೇವಿಸುತ್ತಿದ್ದರು. ಅವರು ಔಷಧಿಗಳನ್ನು ಸೇವಿಸಿದ ನಂತರ ಅವರು ಚೆನ್ನಾಗಿ ವರ್ತಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ.

ನಿನ್ನೆ ಆರೋಗ್ಯ ಸಚಿವ ನಬಾ ದಾಸ್ ಅವರು ಜಾರ್ಸುಗುಡಾ ಜಿಲ್ಲೆಯ ಬ್ರಜರಾಜನಗರದಲ್ಲಿ ಗುಂಡು ಹಾರಿಸಲಾಗಿದ್ದು, ಗುಂಡೇಟಿನಿಂದ ಗಾಯಗೊಂಡು ಭುವನೇಶ್ವರ ಆಸ್ಪತ್ರೆಯಲ್ಲಿ ಭಾನುವಾರ ಸಾವನ್ನಪ್ಪಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT