ಅಪಘಾತಗೊಂಡ ಕಾರಿನ ಚಿತ್ರ 
ದೇಶ

ಹರಿಯಾಣ: ಮದುವೆಯಿಂದ ವಾಪಸ್ಸಾಗುತ್ತಿದ್ದವರು ಮಸಣಕ್ಕೆ; ಭೀಕರ ಅಪಘಾತದಲ್ಲಿ ಮೂವರು ಸಾವು, 7 ಮಂದಿಗೆ ಗಾಯ

ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಮೂವರು ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವರಿ ಬಳಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. 

ರೆವಾರಿ: ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಮೂವರು ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವರಿ ಬಳಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. 

ಬೆಳಗ್ಗೆ ಮುಂಜಾನೆ 1-30ರ ಸುಮಾರಿನಲ್ಲಿ ಗುಜರ್ ವಾಸ್ ಗ್ರಾಮದ ಬಳಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಇಬ್ಬರು ಚಾಲಕರು ಹಾಗೂ ಪ್ರಯಾಣಿಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇತರ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕರು ನಿಯಂತ್ರಣ ಕಳೆದುಕೊಂಡು ಈ ಅಪಘಾತ ಸಂಭವಿಸಿದೆ ಎಂದು  ಡಿಎಸ್ ಪಿ ಸುಭಾಶ್ ಚಂದ್ರ ತಿಳಿಸಿದ್ದಾರೆ. 

 ಅಪಘಾತದಲ್ಲಿ ಗಾಯಗೊಂಡ ಒಬ್ಬರು ಎಎನ್‌ಐಗೆ ತಿಳಿಸಿದರು, ಅವರ ಕಾರಿನ ಚಾಲಕ ಯಾವುದೇ ಅಹಿತಕರ ಘಟನೆಯನ್ನು ತಪ್ಪಿಸಲು ಪ್ರಯತ್ನಿಸಿದ ನಂತರ ಮತ್ತೊಂದು ಕಾರು ವಿರುದ್ಧ ದಿಕ್ಕಿನಿಂದ ವೇಗವಾಗಿ ಅವರ ಕಡೆಗೆ ಹೋಗುತ್ತಿದ್ದರಿಂದ ಅವರು ಮುಖಾಮುಖಿ ಡಿಕ್ಕಿ ಹೊಡೆದರು.

ಮದುವೆ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ  ರುದ್ಧ ದಿಕ್ಕಿನಿಂದ ಅತಿವೇಗದಿಂದ ಬಂದ ಸ್ವಿಫ್ಟ್ ಡಿಜೈರ್ ಬಂದಿತು. ಅಪಘಾತದಿಂದ ಪಾರಾಗಲು ನಮ್ಮ ಕಾರು ಚಾಲಕ ಮಾರ್ಗ ಬದಲಿಸಲು ಯತ್ನಿಸಿದಾಗ ಆತನೂ ಅದೇ ರೀತಿ ಮಾಡಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಗಾಯಾಳು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!