ನಿತೀಶ್ ಕುಮಾರ್ 
ದೇಶ

ಮತ್ತೆ ಬಿಜೆಪಿ ಜೊತೆ ಕೈಜೋಡಿಸುವುದಕ್ಕಿಂತ ನಾನು ಸಾಯಲು ಸಿದ್ಧ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಬಿಜೆಪಿಯೊಂದಿಗೆ ಮರುಮೈತ್ರಿಯ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಅಲ್ಲದೆ, ಅವರು ತಮ್ಮ ಹಿಂದಿನ ಮಿತ್ರರೊಂದಿಗೆ 'ಕೈಜೋಡಿಸುವ ಬದಲು ಸಾಯುವುದೇ ಲೇಸು' ಎಂದು ಪ್ರತಿಪಾದಿಸಿದ್ದಾರೆ.

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಬಿಜೆಪಿಯೊಂದಿಗೆ ಮರುಮೈತ್ರಿಯ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಅಲ್ಲದೆ, ಅವರು ತಮ್ಮ ಹಿಂದಿನ ಮಿತ್ರರೊಂದಿಗೆ 'ಕೈಜೋಡಿಸುವ ಬದಲು ಸಾಯುವುದೇ ಲೇಸು' ಎಂದು ಪ್ರತಿಪಾದಿಸಿದ್ದಾರೆ.

ತಮ್ಮೊಂದಿಗೆ ಮೈತ್ರಿಯಲ್ಲಿದ್ದಾಗ ಬಿಜೆಪಿಯ ಹಿಂದುತ್ವ ಸಿದ್ಧಾಂತದ ಬಗ್ಗೆ ಯಾವಾಗಲೂ ವಿರುದ್ಧವಾಗಿರುವ ಮುಸ್ಲಿಮರು ಸೇರಿದಂತೆ ತಮ್ಮೆಲ್ಲಾ ಬೆಂಬಲಿಗರ ಮತಗಳನ್ನು ಅದು ಪಡೆಯುತ್ತಿತ್ತು ಎಂದು ಜೆಡಿಯು ನಾಯಕ ನೆನಪಿಸಿಕೊಂಡರು.

ಮುಂದಿನ ವರ್ಷ ರಾಜ್ಯದ 40 ಲೋಕಸಭಾ ಸ್ಥಾನಗಳ ಪೈಕಿ 36 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ ಎಂದು ವ್ಯಂಗ್ಯವಾಡಿದರು.

ತಮ್ಮ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ತಂದೆ ಲಾಲು ಪ್ರಸಾದ್ ಅವರ ವಿರುದ್ಧದ 'ಆಧಾರರಹಿತ' ಭ್ರಷ್ಟಾಚಾರ ಪ್ರಕರಣಗಳ ನಂತರ 2017 ರಲ್ಲಿ ಎನ್‌ಡಿಎಗೆ ಮರಳಿದ್ದು 'ತಪ್ಪು' ಎಂದು ಪುನರುಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!