ಪ್ರಧಾನಿ ನರೇಂದ್ರ ಮೋದಿ 
ದೇಶ

'ನಕಲಿ ಗ್ಯಾರಂಟಿ' ನೀಡುವವರ ಬಗ್ಗೆ ಎಚ್ಚರಿಕೆ ವಹಿಸಿ: ಪ್ರಧಾನಿ ಮೋದಿ

ಕರ್ನಾಟಕದಲ್ಲಿನ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸೇರಿದಂತೆ  ಕುಟುಂಬ-ಕೇಂದ್ರಿತ ರಾಜಕೀಯ ಪಕ್ಷಗಳು ನೀಡುತ್ತಿರುವ ನಕಲಿ ಗ್ಯಾರಂಟಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಶಾಹದೋಲ್‌: ಕರ್ನಾಟಕದಲ್ಲಿನ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸೇರಿದಂತೆ  ಕುಟುಂಬ-ಕೇಂದ್ರಿತ ರಾಜಕೀಯ ಪಕ್ಷಗಳು ನೀಡುತ್ತಿರುವ ನಕಲಿ ಗ್ಯಾರಂಟಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಮಧ್ಯಪ್ರದೇಶದ ಶಾಹದೋಲ್‌ನಲ್ಲಿಂದು  ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ನಕಲಿ ಗ್ಯಾರಂಟಿ ನೀಡುವ ಪಕ್ಷಗಳ ಬಗ್ಗೆ ಎಚ್ಚರದಿಂದಿರಿ. ಅಂತಹ ಜನರು ತಮ್ಮ ರಾಜಕೀಯವೇ ಗ್ಯಾರಂಟಿ ಇಲ್ಲದಿದ್ದರೂ  ಗ್ಯಾರಂಟಿ ಯೋಜನೆಗಳನ್ನು ತರುವುದಾಗಿ ಹೇಳುತ್ತಿದ್ದಾರೆ ಎಂದರು. 

ಕಾಂಗ್ರೆಸ್ ಸೇರಿದಂತೆ ಕುಟುಂಬ ಕೇಂದ್ರಿತ ಪಕ್ಷಗಳು ಒಟ್ಟಾಗಿವೆ. ಆಸ್ಪತ್ರೆಗಳಲ್ಲಿ ಆಯುಷ್ಮನ್ ಭಾರತ್ ಕಾರ್ಡ್ ನಿಂದ ರೂ.5 ಲಕ್ಷ ವರೆಗಿನ ಚಿಕಿತ್ಸೆ ಗ್ಯಾರಂಟಿಯಾಗಿ ದೊರೆಯಲಿದೆ. ಇದು ಮೋದಿ ಗ್ಯಾರಂಟಿ ಎಂದು ತಿಳಿಸಿದರು. 

ಇದೇ ಸಂದರ್ಭದಲ್ಲಿ ದೇಶದಲ್ಲಿ 3 ಕೋಟಿಗೂ ಅಧಿಕ ಜನರಿಗೆ ಡಿಜಿಟಲ್ ಆಯುಷ್ಮನ್ ಕಾರ್ಡ್ ವಿತರಣೆಯನ್ನು ಆರಂಭಿಸಿದ ಪ್ರಧಾನಿ,  ರಾಣಿ ದುರ್ಗಾವತಿ ಅವರ 500ನೇ ಜನ್ಮ ದಿನಾಚರಣೆಯನ್ನು ಭಾರತದಾದ್ಯಂತ ಆಚರಿಸಲಾಗುವುದು, ಅಂಚೆಚೀಟಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Big step or big threat? ರಷ್ಯಾದಿಂದ ತೈಲ ಖರೀದಿ, ಭಾರತಕ್ಕೆ ಮತ್ತೆ ಭಾರಿ ಸುಂಕದ ಎಚ್ಚರಿಕೆ ನೀಡಿದ ಟ್ರಂಪ್!

ಹಾಂಕಾಂಗ್: ರನ್​ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ, ಇಬ್ಬರು ಸಾವು

Women World Cup 2025: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ರನ್‌ಗಳ ವಿರೋಚಿತ ಸೋಲು; ಸೆಮಿಸ್‌ಗಾಗಿ ಕಿವೀಸ್ ಜೊತೆ ಸೆಣೆಸಾಟ!

ಮುಸ್ಲಿಂ ಯುವಕರನ್ನು ಮದುವೆಯಾದರೆ ಅಂತಹ ಮಗಳ ಕಾಲು ಮುರಿಯಿರಿ: ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಅವಹೇಳನ: ರಮೇಶ್ ಕತ್ತಿಗೆ ಸಂಕಷ್ಟ; ಅಟ್ರಾಸಿಟಿ ಪ್ರಕರಣ ದಾಖಲು!

SCROLL FOR NEXT