ಪ್ರಧಾನಿ ಮೋದಿ 
ದೇಶ

ಕೃಷಿ, ರೈತರ ಕಲ್ಯಾಣಕ್ಕಾಗಿ ವಾರ್ಷಿಕ 6.5 ಲಕ್ಷ ಕೋಟಿ ರೂಪಾಯಿ ವೆಚ್ಚ: ಪ್ರಧಾನಿ ಮೋದಿ

ಕೃಷಿ ಕ್ಷೇತ್ರ ಮತ್ತು ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ವಾರ್ಷಿಕವಾಗಿ 6.5 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ ಎಂದು ಶನಿವಾರ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಖಾದ್ಯ ತೈಲ ತಯಾರಿಕೆಯಲ್ಲಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಲು ಸಹಕಾರಿ ಸಂಘಗಳಿಗೆ ಕರೆ ನೀಡಿದರು.

ನವದೆಹಲಿ: ಕೃಷಿ ಕ್ಷೇತ್ರ ಮತ್ತು ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ವಾರ್ಷಿಕವಾಗಿ 6.5 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ ಎಂದು ಶನಿವಾರ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಖಾದ್ಯ ತೈಲ ತಯಾರಿಕೆಯಲ್ಲಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಲು ಸಹಕಾರಿ ಸಂಘಗಳಿಗೆ ಕರೆ ನೀಡಿದರು.

ಅಂತರಾಷ್ಟ್ರೀಯ ಸಹಕಾರಿ ದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಮಂತ್ರಿ, 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ಪಿಎಂ ಕಿಸಾನ್ ಯೋಜನೆ, ಬೆಂಬಲ ಬೆಲೆ ಯೋಜನೆ ಮತ್ತು ರಸಗೊಬ್ಬರ ಸಬ್ಸಿಡಿಯಂತಹ ತಮ್ಮ ಸರ್ಕಾರ ಮಾಡಿದ ಕೆಲಸಗಳನ್ನು ಒತ್ತಿ ಹೇಳಿದರು.

ಕಳೆದ ಒಂಬತ್ತು ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರ ಉತ್ಪನ್ನಗಳನ್ನು ಖರೀದಿಸಿದ್ದು, ರೂ. 15 ಲಕ್ಷಕ್ಕೂ ಕೋಟಿಗೂ ಅಧಿಕ ಹಣವನ್ನು ರೈತರಿಗೆ ನೀಡಲಾಗಿದೆ. ಕಳೆದ ವರ್ಷ ರಸಗೊಬ್ಬರ ಸಬ್ಸಿಡಿಗಾಗಿ ರೂ. 10 ಲಕ್ಷ ಕೋಟಿ ಖರ್ಚು ಮಾಡಲಾಗಿದೆ  ಎಂದರು.

ಬೇರೆ ರೀತಿಯಲ್ಲಿ ಹೇಳುವುದಾದರೆ, ಸರ್ಕಾರ ಕೃಷಿ ಮತ್ತು ರೈತರಿಗಾಗಿ ವರ್ಷಕ್ಕೆ ಸುಮಾರು 6.5 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಪ್ರತಿ ವರ್ಷ ಯಾವುದಾದರೂಂದು ರೂಪದಲ್ಲಿ ಪ್ರತಿ ರೈತರಿಗೆ ಸರಾಸರಿ 50,000 ರೂ.ಗಳನ್ನು ಸರ್ಕಾರ ನೀಡುತ್ತಿದೆ.

ಇದು ಮೋದಿಯವರ ಗ್ಯಾರಂಟಿ ಎಂದ ಅವರು, ತಾನೂ ಸರ್ಕಾರ ಮಾಡಿರುವುದನ್ನು ಹೇಳುತ್ತಿದ್ದೇನೆ ಹೊರತು ಭರವಸೆ ಅಲ್ಲ, ಕಳೆದ 4 ವರ್ಷಗಳಲ್ಲಿ, ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ 2.5 ಲಕ್ಷ ಕೋಟಿ ರೂಪಾಯಿಗಳನ್ನು ಕಳುಹಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಯುದ್ಧದ ಕುರಿತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮೋದಿ ಮಹತ್ವದ ಮಾತುಕತೆ

ಗುಜರಾತ್: ರಾಹುಲ್ ಗಾಂಧಿ ಪರ ವಕಾಲತ್ತು ವಹಿಸಿದ್ದ ವಕೀಲ ಫಿರೋಜ್ ಪಠಾಣ್ ಮೃತದೇಹ ತಾಪಿ ನದಿಯ ದಡದಲ್ಲಿ ಪತ್ತೆ!

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ

ಬೀಡಿಗಳಿಗೆ ಬಿಹಾರದ ಹೋಲಿಕೆ: ಕೇರಳ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥನ ತಲೆದಂಡ

SCROLL FOR NEXT