ಅಪಘಾತ ಸ್ಥಳ ಪರಿಶೀಲಿಸಿದ ಸಿಎಂ ಶಿಂಧೆ 
ದೇಶ

ಮಹಾರಾಷ್ಟ್ರ ಬಸ್ ದುರಂತ: ಅಪಘಾತ ತಡೆಗಟ್ಟಲು ಕ್ರಮ- ಸಿಎಂ ಏಕನಾಥ್ ಶಿಂಧೆ

25 ಮಂದಿಯ ಸಾವಿಗೆ ಕಾರಣವಾದ ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಬಸ್ ದುರಂತದ ಬೆನ್ನಲ್ಲೇ ಇಂತಹ ಅಪಘಾತಗಳನ್ನು ತಪ್ಪಿಸಲು ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹೇಳಿದ್ದಾರೆ.

ಮುಂಬೈ: 25 ಮಂದಿಯ ಸಾವಿಗೆ ಕಾರಣವಾದ ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಬಸ್ ದುರಂತದ ಬೆನ್ನಲ್ಲೇ ಇಂತಹ ಅಪಘಾತಗಳನ್ನು ತಪ್ಪಿಸಲು ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹೇಳಿದ್ದಾರೆ.

ಅಪಘಾತ ಸಂಭವಿಸಿದ ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಬುಲ್ಧಾನಾ ಜಿಲ್ಲೆಯ ಪಿಂಪಲ್ಖುಟಾ ಗ್ರಾಮಕ್ಕೆ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಜೊತೆ ಆಗಮಿಸಿ ಪರಿಶೀಲನೆ ನಡೆಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನಾಗ್ಪುರ-ಮುಂಬೈನಲ್ಲಿ ಅಪಘಾತಗಳನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದೇ ವೇಳೆ ಪೊಲೀಸ್ ಸಿಬ್ಬಂದಿ, ಜಿಲ್ಲಾಡಳಿತ ಅಧಿಕಾರಿಗಳು ಮತ್ತು ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಅವರು ದುರಂತದ ಅನುಕ್ರಮದ ಬಗ್ಗೆ ತಿಳಿಸಿದರು. ಇದೇ ವೇಳೆ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಂಧೆ, ಎಲ್ಲಾ ವಾಹನಗಳ ಚಾಲಕರು ವೇಗದ ಮಿತಿಗೆ ಸಂಬಂಧಿಸಿದ ನಿಯಮಗಳನ್ನು ಪಾಲಿಸಬೇಕು. ಸಮೃದ್ಧಿ ಎಕ್ಸ್ ಪ್ರೆಸ್ ವೇಯಲ್ಲಿ ಇಲ್ಲಿಯವರೆಗೆ ಮಾನವನ ತಪ್ಪುಗಳಿಂದಲೇ ಹೆಚ್ಚಿನ ಅಪಘಾತಗಳು ಸಂಭವಿಸಿವೆ. ಆದರೆ ಸರ್ಕಾರ ಈ ಅಪಘಾತವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಪಘಾತಗಳು ಮತ್ತು ದೋಷಗಳು ಸಂಭವಿಸದಂತೆ ಕ್ರಮಕೈಗೊಳ್ಳಲಾಗುವುದು’ ಎಂದರು.

ಅಪಘಾತಗಳನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಮೊದಲು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಇಂದಿನ ಅಪಘಾತದಲ್ಲಿ 25 ಜನರ ಸಾವು ದುರದೃಷ್ಟಕರವಾಗಿದೆ. ಬಸ್‌ನ ಬಾಗಿಲು ಲಾಕ್ ಆಗಿದ್ದರಿಂದ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಎಂಟು ಜನರು ಹೊರಗೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ವಾಹನಗಳು, ಅಗ್ನಿಶಾಮಕ ದಳ ಮತ್ತು ಎಕ್ಸ್‌ಪ್ರೆಸ್‌ವೇಯಲ್ಲಿದ್ದ ಪೊಲೀಸರು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಹೇಳಿದರು.

5 ಲಕ್ಷ ರೂ ಪರಿಹಾರ
ಇದೇ ವೇಳೆ ಸಿಎಂ ಶಿಂಧೆ ಬಸ್ ದುರಂತದ ಸಂತ್ರಸ್ಥರಿಗೆ ಪರಿಹಾರ ಘೋಷಣೆ ಮಾಡಿದ್ದು, ತಲಾ 5 ಲಕ್ಷ ರೂ ನೀಡುವ ಭರವಸೆ ನೀಡಿದ್ದಾರೆ.

ಸಹಾಯವಾಣಿ
ಇನ್ನು ಬುಲ್ಧಾನ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯು ಪ್ರಯಾಣಿಕರ ಬಗ್ಗೆ ಮಾಹಿತಿಗಾಗಿ ಎರಡು ಸಹಾಯವಾಣಿ ಸಂಖ್ಯೆಗಳ ತೆರೆದಿದ್ದು, 7020435954 ಮತ್ತು 07262242683 ಸಂಖ್ಯೆಗಳಿಗೆ ಕರೆ ಮಾಡಿ ಸಂತ್ರಸ್ಥರ ಕುರಿತು ಮಾಹಿತಿ ಪಡೆಯಬಹುದಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT