ಸಂಸತ್ತು 
ದೇಶ

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20ಕ್ಕೆ ಆರಂಭ

ಸಂಸತ್ತಿನ ಮುಂಗಾರು ಅಧಿವೇಶನ(Mansoon session of Parliament) ಜುಲೈ 20ರಂದು ಆರಂಭವಾಗಲಿದೆ. ಜುಲೈ 20ರಂದು ಆರಂಭವಾಗುವ ಅಧಿವೇಶನ ಆಗಸ್ಟ್ 11ರವರೆಗೆ ಮುಂದುವರಿಯಲಿದೆ.

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ(Mansoon session of Parliament) ಜುಲೈ 20ರಂದು ಆರಂಭವಾಗಲಿದೆ. ಜುಲೈ 20ರಂದು ಆರಂಭವಾಗುವ ಅಧಿವೇಶನ ಆಗಸ್ಟ್ 11ರವರೆಗೆ ಮುಂದುವರಿಯಲಿದೆ.

ಸಂಸತ್ತು ಕಲಾಪಗಳು ಸುಗಮವಾಗಿ, ಸರಾಗವಾಗಿ ಮತ್ತು ದೇಶದ ಜನರಿಗೆ ಉಪಯೋಗವಾಗುವಂತಹ ಚರ್ಚೆಗಳನ್ನು ಕಲಾಪ ವೇಳೆ ನಡೆಸಿಕೊಂಡು ಹೋಗಲು ಎಲ್ಲಾ ಪಕ್ಷಗಳ ಸದಸ್ಯರು ಸಹಕಾರ ನೀಡಬೇಕೆಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮನವಿ ಮಾಡಿಕೊಂಡಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ನಡೆಸಲು ವಿರೋಧ ಪಕ್ಷಗಳು ಇತ್ತೀಚೆಗೆ ಸಭೆ ಸೇರಿ ನಿರ್ಧಾರ ತೆಗೆದುಕೊಂಡಿರುವುದರಿಂದ ಅಧಿವೇಶನವು ಈ ಬಾರಿ ಕುತೂಹಲದಿಂದ ಕೂಡಿದೆ.

ಇದರ ಜೊತೆಗೆ, ಏಕರೂಪ ನಾಗರಿಕ ಸಂಹಿತೆಗಾಗಿ ಪ್ರಧಾನಿ ಮೋದಿ ಅವರು ಬಲವಾಗಿ ಪ್ರದಿಪಾದಿಸಿರುವ ಸಂದರ್ಭದಲ್ಲಿ ಈ ವಿಷಯದ ಕುರಿತು ಸಮಾಲೋಚನೆಗಳನ್ನು ನಡೆಸುವ ಸಂದರ್ಭದಲ್ಲಿ ಸಂಸತ್ತು ಕಲಾಪ ನಡೆಯುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT