ಪಿಎಂ ನರೇಂದ್ರ ಮೋದಿ 
ದೇಶ

ರಾಷ್ಟ್ರೀಯ ವೈದ್ಯರ ದಿನ: ವೈದ್ಯರು, ಸಿಎಗಳನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ಜುಲೈ 1ರ ಶನಿವಾರ ರಾಷ್ಟ್ರೀಯ ವೈದ್ಯರ ದಿನದಂದು ವೈದ್ಯರ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿಯವರು, ವೈದ್ಯರು ಉನ್ನತ ಮಟ್ಟದ ಧೈರ್ಯ, ನಿಸ್ವಾರ್ಥತೆ ಮತ್ತು ಗಟ್ಟಿತನಕ್ಕೆ ಮಾದರಿಯಾಗಿದ್ದಾರೆ ಎಂದು ಕರೆದರು.

ನವದೆಹಲಿ: ಜುಲೈ 1ರ ಶನಿವಾರ ರಾಷ್ಟ್ರೀಯ ವೈದ್ಯರ ದಿನದಂದು ವೈದ್ಯರ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿಯವರು, ವೈದ್ಯರು ಉನ್ನತ ಮಟ್ಟದ ಧೈರ್ಯ, ನಿಸ್ವಾರ್ಥತೆ ಮತ್ತು ಗಟ್ಟಿತನಕ್ಕೆ ಮಾದರಿಯಾಗಿದ್ದಾರೆ ಎಂದು ಕರೆದರು.

'ವೈದ್ಯರ ದಿನದಂದು ನಾನು ಇಡೀ ವೈದ್ಯರ ಸಮುದಾಯಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಅತ್ಯಂತ ಕಷ್ಟದ ಅಥವಾ ಹಿಂದೆಂದು ಕಂಡಿರದ ಸಂದರ್ಭಗಳಲ್ಲಿಯೂ ವೈದ್ಯರು ಅತ್ಯುನ್ನತ ಮಟ್ಟದ ಧೈರ್ಯ, ನಿಸ್ವಾರ್ಥತೆ ಮತ್ತು ಗಟ್ಟಿತನವನ್ನು ತೋರಿಸುವ ಮೂಲಕ ಮಾದರಿಯಾಗಿದ್ದಾರೆ. ಅವರ ಸಮರ್ಪಣೆ ಗುಣಪಡಿಸುವಿಕೆಯನ್ನು ಮೀರಿದೆ. ಇದು ನಮ್ಮ ಸಮಾಜಕ್ಕೆ ಭರವಸೆ ಮತ್ತು ಶಕ್ತಿಯನ್ನು ನೀಡುತ್ತದೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.

ಜುಲೈ 1 ರಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಖ್ಯಾತ ವೈದ್ಯರಾದ ಬಿಧನ್ ಚಂದ್ರ ರಾಯ್ ಅವರ ಸ್ಮರಣಾರ್ಥವಾಗಿ ರಾಷ್ಟ್ರೀಯ ವೈದ್ಯರ ದಿನವಾಗಿ ಆಚರಿಸಲಾಗುತ್ತದೆ. ಅವರ ಜನ್ಮ ವಾರ್ಷಿಕೋತ್ಸವ ಮತ್ತು ಪುಣ್ಯತಿಥಿಯು ಈ ಈ ದಿನದಂದು ಬರುತ್ತದೆ.

ಸಿಎ ದಿನ

ಮತ್ತೊಂದು ಟ್ವೀಟ್‌ನಲ್ಲಿ, ಸಿಎ ದಿನದಂದು ಚಾರ್ಟರ್ಡ್ ಅಕೌಂಟೆಂಟ್‌ಗಳ ಸೇವೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಅನ್ನು ಜುಲೈ 1 ರಲ್ಲಿ 1949 ರಲ್ಲಿ ಸ್ಥಾಪಿಸಲಾಯಿತು.

'ಚಾರ್ಟರ್ಡ್ ಅಕೌಂಟೆಂಟ್ಸ್ ದಿನದಂದು, ನಮ್ಮ ರಾಷ್ಟ್ರದ ಪ್ರಮುಖ ಹಣಕಾಸು ವಾಸ್ತುಶಿಲ್ಪಿಗಳಲ್ಲಿ ಒಬ್ಬರಾದ ವೃತ್ತಿಪರ ಸಮುದಾಯವನ್ನು ನಾವು ಗೌರವಿಸುತ್ತೇವೆ. ಅವರ ವಿಶ್ಲೇಷಣಾತ್ಮಕ ಕುಶಾಗ್ರಮತಿ ಮತ್ತು ದೃಢವಾದ ಬದ್ಧತೆಯು ನಮ್ಮ ಆರ್ಥಿಕತೆಯನ್ನು ಬಲಪಡಿಸುವಲ್ಲಿ ನಿರ್ಣಾಯಕವಾಗಿದೆ. ಅವರ ಪರಿಣತಿಯು ಸಮೃದ್ಧ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಲು ಸಹಾಯ ಮಾಡುತ್ತದೆ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT