ಅಜಿತ್ ಪವಾರ್ ಸುದ್ದಿಗೋಷ್ಠಿ 
ದೇಶ

ಮಹಾರಾಷ್ಟ್ರ: ಏಕನಾಥ್ ಶಿಂಧೆ ಸರ್ಕಾರ ಸೇರಲು ಕಾರಣ ತಿಳಿಸಿದ ಅಜಿತ್ ಪವಾರ್!

ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎನ್ ಸಿಪಿ ನಾಯಕ ಅಜಿತ್ ಪವಾರ್, ದೇಶದ ಅಭಿವೃದ್ಧಿಗಾಗಿ ಏಕನಾಥ್ ಶಿಂಧೆ ಸರ್ಕಾರದ ಭಾಗವಾಗಲು ನಿರ್ಧರಿಸಿದ್ದಾಗಿ ಭಾನುವಾರ ತಿಳಿಸಿದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದರು.

ಮುಂಬೈ: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎನ್ ಸಿಪಿ ನಾಯಕ ಅಜಿತ್ ಪವಾರ್, ದೇಶದ ಅಭಿವೃದ್ಧಿಗಾಗಿ ಏಕನಾಥ್ ಶಿಂಧೆ ಸರ್ಕಾರದ ಭಾಗವಾಗಲು ನಿರ್ಧರಿಸಿದ್ದಾಗಿ ಭಾನುವಾರ ತಿಳಿಸಿದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌ಸಿಪಿಯಲ್ಲಿ ಯಾವುದೇ ಒಡಕು ಇಲ್ಲ, ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಎನ್‌ಸಿಪಿ ಹೆಸರು ಮತ್ತು ಚಿಹ್ನೆಯ ಮೇಲೆ ಸ್ಪರ್ಧಿಸುತ್ತೇವೆ. ಪಕ್ಷದ ಎಲ್ಲಾ ಚುನಾಯಿತ ಪ್ರತಿನಿಧಿಗಳು ಸರ್ಕಾರ ಸೇರುವ ನಿರ್ಧಾರವನ್ನು ಬೆಂಬಲಿಸಿದ್ದಾರೆ ಎಂದು ಅವರು ತಿಳಿಸಿದರು.

ಬಿಜೆಪಿಯೊಂದಿಗೆ ಅಧಿಕಾರ ಹಂಚಿಕೊಳ್ಳುವ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಅವರು, ನಾವು ಶಿವಸೇನೆಯೊಂದಿಗೆ ಹೋಗಬಹುದು, ನಂತರ  ಬಿಜೆಪಿಯೊಂದಿಗೆ ಹೋಗಬಹುದು, ನಾಗಾಲ್ಯಾಂಡ್‌ನಲ್ಲೂ ಅದೇ ನಡೆದಿದೆ.ಒಟ್ಟಾರೆಯಾಗಿ ಸಮಗ್ರ ಅಭಿವೃದ್ಧಿಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ನಮಗೆ ಆಡಳಿತದ ಅಪಾರ ಅನುಭವವಿದೆ, ಅದನ್ನು ನಾವು  ಒಳ್ಳೆಯದಕ್ಕೆ ಬಳಸಿಕೊಳ್ಳಬಹುದು ಎಂದರು. 

ಒಂದೆರಡು ದಿನಗಳಲ್ಲಿ ಸಂಪುಟ ಖಾತೆಗಳನ್ನು ಪ್ರಕಟಿಸಲಾಗುವುದು, ಅದರಲ್ಲಿ ನಾವು ಕೆಲಸವನ್ನು ಪ್ರಾರಂಭಿಸುತ್ತೇವೆ ಎಂದು ಪವಾರ್ ತಿಳಿಸಿದರು. ಪವಾರ್ ಅವರು ಉಪಮುಖ್ಯಮಂತ್ರಿಯಾಗಿ  ಪ್ರಮಾಣ ವಚನ ಸ್ವೀಕರಿಸಿದರೆ, ಪಕ್ಷದ ಎಂಟು ಶಾಸಕರು ಶಿಂಧೆ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಸ್ವತಃ ಪವಾರ್ ಸಾಹೇಬ್ ಹೇಳಿದ್ದಾರೆ. ನಾವು ಅಭಿವೃದ್ಧಿಗಾಗಿ ಈ ಸರ್ಕಾರದೊಂದಿಗೆ ಬರಲು ನಿರ್ಧರಿಸಿದ್ದೇವೆ ಎಂದು ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT