ವಿಪಕ್ಷಗಳ ನಾಯಕರ ಸಭೆ(ಸಂಗ್ರಹ ಚಿತ್ರ) 
ದೇಶ

ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಪರ್ಯಾಯ ಶಕ್ತಿ ರಚಿಸಲು ಎಲ್ಲಾ ವಿಪಕ್ಷಗಳ ತಂತ್ರ: ಜುಲೈ 17-18ರಂದು ಸಭೆ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಎದುರಿಸಲು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್, ಸ್ಥಳೀಯ ಪಕ್ಷಗಳು ಸೇರಿದಂತೆ ವಿಪಕ್ಷಗಳು ಒಟ್ಟು ಸೇರಿ ತಂತ್ರ ಹೆಣೆಯಲು ಮುಂದಾಗಿದ್ದು ಅದರಂತೆ ಕಳೆದ ವಾರ ಬಿಹಾರದ ಪಾಟ್ನಾದಲ್ಲಿ ಸಭೆ ನಡೆಸಲಾಗಿತ್ತು. 

ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಎದುರಿಸಲು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್, ಸ್ಥಳೀಯ ಪಕ್ಷಗಳು ಸೇರಿದಂತೆ ವಿಪಕ್ಷಗಳು ಒಟ್ಟು ಸೇರಿ ತಂತ್ರ ಹೆಣೆಯಲು ಮುಂದಾಗಿದ್ದು ಅದರಂತೆ ಕಳೆದ ವಾರ ಬಿಹಾರದ ಪಾಟ್ನಾದಲ್ಲಿ ಸಭೆ ನಡೆಸಲಾಗಿತ್ತು. 

ಇದೀಗ ಎರಡನೇ ಸುತ್ತಿನ ಸಭೆಯನ್ನು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ನಡೆಸಲು ವಿಪಕ್ಷಗಳ ನಾಯಕರು ಮುಂದಾಗಿದ್ದು ಆರಂಭದಲ್ಲಿ ಜುಲೈ 13 ಮತ್ತು 14ರಂದು ಸಭೆ ದಿನಾಂಕಗಳು ನಿಗದಿಯಾಗಿದ್ದವು. ಆದರೆ ಅದನ್ನು ಮುಂದೂಡಿ ಇದೀಗ ಜುಲೈ 17 ಮತ್ತು 18ರಂದು ಬೆಂಗಳೂರಿನಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಫ್ಯಾಸಿಸ್ಟ್ ಮತ್ತು ಅಪ್ರಜಾಸತ್ತಾತ್ಮಕ ಶಕ್ತಿಗಳನ್ನು ಸೋಲಿಸಲು ಮತ್ತು ದೇಶವನ್ನು ಅಭಿವೃದ್ಧಿಯಲ್ಲಿ ಮುಂದಕ್ಕೆ ಕೊಂಡೊಯ್ಯಲು ನಮ್ಮ ಸಂಕಲ್ಪದಲ್ಲಿ ಅಚಲರಾಗಿದ್ದೇವೆ ಎಂದು ವೇಣುಗೋಪಾಲ್ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!