ಮನೀಶ್ ಸಿಸೋಡಿಯಾ 
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ನವದೆಹಲಿ: ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ಸಿಸೋಡಿಯಾ ಅವರಿಗೆ ಜಾಮೀನು ನೀಡಲು ನಿರಾಕರಿಸಿದರು. ಅವರು ಈ ಹಂತದಲ್ಲಿ ಜಾಮೀನು ಪಡೆಯಲು ಅರ್ಹರಲ್ಲ ಎಂದು ಹೇಳಿದರು.

ಸಿಸೋಡಿಯಾ ಅವರಲ್ಲದೆ, ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಹ ಆರೋಪಿಗಳಾದ ಉದ್ಯಮಿಗಳಾದ ಅಭಿಷೇಕ್ ಬೋನಪಲ್ಲಿ, ಬೆನೊಯ್ ಬಾಬು ಮತ್ತು ವಿಜಯ್ ನಾಯರ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವ ಸಿಸೋಡಿಯಾ ಅವರನ್ನು ಫೆಬ್ರುವರಿ 26 ರಂದು ಸಿಬಿಐ ಮೊದಲ ಬಾರಿಗೆ ಬಂಧಿಸಿತು ಮತ್ತು ಅಂದಿನಿಂದ ಅವರು ಬಂಧನದಲ್ಲಿದ್ದಾರೆ.

ಸಿಬಿಐ ಪ್ರಕರಣದಲ್ಲಿ ಈಗಾಗಲೇ ಮೇ 30ರಂದು ಹೈಕೋರ್ಟ್ ಜಾಮೀನು ನಿರಾಕರಿಸಿದೆ. 

ಇ.ಡಿ ದಾಖಲಿಸಿದ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಮಾರ್ಚ್ 9 ರಂದು ಬಂಧಿಸಲಾಯಿತು ಮತ್ತು ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ದೆಹಲಿ ಸರ್ಕಾರವು ನವೆಂಬರ್ 17, 2021 ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತು. ಆದರೆ, ಭ್ರಷ್ಟಾಚಾರದ ಆರೋಪಗಳ ನಡುವೆ ಸೆಪ್ಟೆಂಬರ್ 2022 ರ ಕೊನೆಯಲ್ಲಿ ಅದನ್ನು ರದ್ದುಗೊಳಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT