ಏಕನಾಥ್ ಶಿಂಧೆ 
ದೇಶ

ಮಹಾ ಸಿಎಂ ಶಿಂಧೆ ಶಿವಸೇನೆ ಸೇರಿದ ಮಾಜಿ ಶಾಸಕ ಶಿಶಿರ್ ಶಿಂಧೆ

ಮಾಜಿ ಶಾಸಕ ಶಿಶಿರ್ ಶಿಂಧೆ ಅವರು ಸೋಮವಾರ ತಮ್ಮ ಬೆಂಬಲಿಗರೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದಾರೆ.

ಮುಂಬೈ: ಮಾಜಿ ಶಾಸಕ ಶಿಶಿರ್ ಶಿಂಧೆ ಅವರು ಸೋಮವಾರ ತಮ್ಮ ಬೆಂಬಲಿಗರೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದಾರೆ.
  
ಈ ಹಿಂದೆ ಅವಿಭಜಿತ ಶಿವಸೇನೆ ಮತ್ತು ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನಿರ್ಮಾಣ ಸೇನೆಯಲ್ಲಿದ್ದ ಶಿಶಿರ್ ಶಿಂಧೆ, ಕಳೆದ ತಿಂಗಳು ಉದ್ಧವ್ ಠಾಕ್ರೆ ನೇತೃತ್ವದ ಸೇನಾ ಬಣವನ್ನು ತೊರೆದಿದ್ದರು. ಈಗ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಶಿಂಧೆ, ತಾವು ಕ್ರಿಯಾಶೀಲ ತಳಮಟ್ಟದ ಕಾರ್ಯಕರ್ತನಾಗಿದ್ದು, ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಏಕನಾಥ್ ಶಿಂಧೆ ಅವರೊಂದಿಗೆ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

ಫೈರ್‌ಬ್ರಾಂಡ್ ಶಿವಸೇನಾ ನಾಯಕರಾಗಿದ್ದ ಶಿಂಧೆ ಅವರು 1991ರಲ್ಲಿ ಪಕ್ಷದ ಇತರ ಕಾರ್ಯಕರ್ತರೊಂದಿಗೆ ಭಾರತ-ಪಾಕಿಸ್ತಾನ ಪಂದ್ಯ ವಿರೋಧಿಸಿ ಮುಂಬೈನ ವಾಂಖೆಡೆ ಕ್ರೀಡಾಂಗಣದ ಪಿಚ್ ಅಗೆದು ಪ್ರತಿಭಟಿಸಿದ್ದರು.

ಶಿಶಿರ್ ಶಿಂಧೆ ಅವರು ಶಿವಸೇನೆಯ ಉಪನಾಯಕರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಶಿಂಧೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ