ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ 
ದೇಶ

ಬಿಜೆಪಿಯ ತಂತ್ರಕ್ಕೆ ಎನ್ ಸಿಪಿಯ ಕೆಲ ನಾಯಕರು ಬಲಿ: ಶರದ್ ಪವಾರ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ವಿಪಕ್ಷಗಳ ಮೈತ್ರಿಕೂಟ ರಚನೆ ಪ್ರಯತ್ನದಲ್ಲಿ ಮುಂಚೂಣಿಯಲ್ಲಿದ್ದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಬಿಜೆಪಿ ನೀಡಿರುವ ಶಾಕ್ ಅಂತಿಂತದಲ್ಲ.

ಮುಂಬೈ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ವಿಪಕ್ಷಗಳ ಮೈತ್ರಿಕೂಟ ರಚನೆ ಪ್ರಯತ್ನದಲ್ಲಿ ಮುಂಚೂಣಿಯಲ್ಲಿದ್ದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಬಿಜೆಪಿ ನೀಡಿರುವ ಶಾಕ್ ಅಂತಿಂತದಲ್ಲ. ಹಲವು ದಶಕಗಳಿಂದ ಕಟ್ಟಿ ಬೆಳೆಸಿದ ಪಕ್ಷ ಒಡೆದಿದ್ದು, ಅದನ್ನು ಮತ್ತೆ ಕಟ್ಟುವುದು ಅಷ್ಟು ಸುಲಭವಲ್ಲಾ. ತನ್ನ ಸಂಬಂಧಿ ಅಜಿತ್ ಪವಾರ್ ಹಾಗೂ ಎಂಟು ಮಂದಿಯ ಶಾಸಕರ ಬಂಡಾಯದಿಂದ ಮಹಾರಾಷ್ಟ್ರ ರಾಜಕೀಯದಲ್ಲಿ ಪ್ರಾಬಲ್ಯ ಮೆರೆಯುತ್ತಿದ್ದ ಎನ್ ಸಿಪಿ ಭವಿಷ್ಯ ಮಂಕಾಗಿದೆ.

ಇಂದು ಕರಾದ್ ನಲ್ಲಿ ಎನ್ ಸಿಪಿ ಕಾರ್ಯಕರ್ತರು ಹಾಗೂ ಬೆಂಬಲಿಗರ ಶಕ್ತಿ ಪ್ರದರ್ಶನ ನಡೆಸಿದ ಶರದ್ ಪವಾರ್, ಮಹಾರಾಷ್ಟ್ರ ಹಾಗೂ ದೇಶದಲ್ಲಿ ಕೋಮು ವಿಭಜನೆಯನ್ನು ಸೃಷ್ಟಿಸುವ ಬಿಜೆಪಿ ತಂತ್ರಗಳಿಗೆ ನಮ್ಮಲ್ಲಿನ ಕೆಲವರು ಬಲಿಯಾಗಿದ್ದಾರೆ ಎಂದು ಆರೋಪಿಸಿದರು. ಶಾಂತಿಪ್ರಿಯ ನಾಗರಿಕರಲ್ಲಿ ಭಯವನ್ನು ಉಂಟುಮಾಡುವ ಶಕ್ತಿಗಳ ವಿರುದ್ಧ ನಾವು ಹೋರಾಡಬೇಕಾಗಿದೆ ಎಂದು ಕರೆ ನೀಡಿದರು.

ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದೆ ಎಂದು 82 ವರ್ಷದ ಹಿರಿಯ ರಾಜಕಾರಣಿ ಶರದ್ ಪವಾರ್ ಜನರಲ್ಲಿ ಮನವಿ ಮಾಡಿದರು. ಇದಕ್ಕೂ ಮುನ್ನಾ ಗುರು ಪೂರ್ಣಿಮೆಯ ಸಂದರ್ಭದಲ್ಲಿ ಮಹಾರಾಷ್ಟ್ರದ ಮೊದಲ ಮುಖ್ಯಮಂತ್ರಿ ದಿವಂಗತ ಚವಾಣ್ ಅವರ ಸ್ಮಾರಕಕ್ಕೆ ತೆರಳಿ ಗೌರವ ನಮನ ಸಲ್ಲಿಸಿದರು. ಸೋಮವಾರ ಬೆಳಗ್ಗೆ ಪುಣೆಯಿಂದ ಕರಾದ್‌ಗೆ ಹೊರಟ ಶರದ್ ಪವಾರ್ ಅವರಿಗೆ, ದಾರಿಯುದ್ದಕ್ಕೂ ರಸ್ತೆಬದಿಯಲ್ಲಿ ಸಾಲುಗಟ್ಟಿ ನಿಂತಿದ್ದ ಅಭಿಮಾನಿಗಳು  ಅಭಿನಂದಿಸುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!