ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೆಹಲಿಯಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ, ಕೆಜಿಗೆ 140 ರೂ.!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಳೆಯಿಂದಾಗಿ ಉತ್ಪಾದನಾ ಕೇಂದ್ರಗಳಿಂದ ಪೂರೈಕೆ ಸ್ಥಗಿತಗೊಂಡ ಕಾರಣ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಟೊಮೆಟೊ ರಿಟೇಲ್ ಬೆಲೆ ಕೆಜಿಗೆ 140 ರೂ.ಗೆ ಏರಿಕೆಯಾಗಿದೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 3 Jul 2023, 4:20 pm

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಳೆಯಿಂದಾಗಿ ಉತ್ಪಾದನಾ ಕೇಂದ್ರಗಳಿಂದ ಪೂರೈಕೆ ಸ್ಥಗಿತಗೊಂಡ ಕಾರಣ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ  ಟೊಮೆಟೊ ರಿಟೇಲ್ ಬೆಲೆ ಕೆಜಿಗೆ 140 ರೂ.ಗೆ ಏರಿಕೆಯಾಗಿದೆ.

ಏಷ್ಯಾದ ಅತಿದೊಡ್ಡ ಸಗಟು ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಾದ ಆಜಾದ್‌ಪುರ ಮಂಡಿಯಲ್ಲಿ ಸೋಮವಾರ ಟೊಮೆಟೊ ವೋಲ್ ಸೇಲ್ ಬೆಲೆ ಗುಣಮಟ್ಟವನ್ನು ಅವಲಂಬಿಸಿ ಕೆಜಿಗೆ 60-120 ರೂ.ವರೆಗೆ ಮಾರಾಟವಾಗಿದೆ.

ಇದನ್ನು ಓದಿ: ಮುಂದಿನ 15 ದಿನಗಳಲ್ಲಿ ಟೊಮೆಟೊ ಬೆಲೆ ಇಳಿಕೆ: ಕೇಂದ್ರ ಸರ್ಕಾರ​

Advertisement

Advertisement

ಮದರ್ ಡೈರಿಯ ಸಫಲ್ ಭಾನುವಾರ ಟೊಮೆಟೊ ಕೆಜಿಗೆ 99 ರೂ.ಗೆ ಮಾರಾಟ ಮಾಡಿದರೆ, ಆನ್‌ಲೈನ್ ಚಿಲ್ಲರೆ ವ್ಯಾಪಾರಿ ಒಟಿಪಿ, ಟೊಮೆಟೊ ಹೈಬ್ರಿಡ್‌ಗೆ ಕೆಜಿಗೆ 140 ರೂ. ಗೆ ಮಾರಾಟ ಮಾಡಿದೆ ಮತ್ತು ಬಿಗ್‌ಬಾಸ್ಕೆಟ್ ನಲ್ಲಿ ಕೆಜಿಗೆ 105-110 ರೂ. ಇತ್ತು.

ಪ್ರಮುಖ ಉತ್ಪಾದನಾ ಕೇಂದ್ರಗಳಿಂದ ಪೂರೈಕೆ ಕಡಿಮೆಯಾದ ಕಾರಣ ಟೊಮೆಟೊ ಬೆಲೆಯಲ್ಲಿ ಏರಿಕೆಯಾಗಿದೆ. ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಆಜಾದ್‌ಪುರ ಟೊಮೆಟೊ ಸಂಘದ ಅಧ್ಯಕ್ಷ ಅಶೋಕ್ ಕೌಶಿಕ್ ಪಿಟಿಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments