ಜಯಂತ್ ಪಾಟೀಲ್ 
ದೇಶ

ನನ್ನನ್ನು ವಜಾ ಮಾಡುವ ಅಧಿಕಾರ ಅಜಿತ್ ಪವಾರ್ ಬಣಕ್ಕೆ ಇಲ್ಲ: ಜಯಂತ್ ಪಾಟೀಲ್

ನನ್ನನ್ನು ಎನ್ ಸಿಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ತೆಗೆದುಹಾಕುವ ಅಧಿಕಾರ ಅಜಿತ್ ಪವಾರ್ ನೇತೃತ್ವದ ಬಂಡಾಯ ಬಣಕ್ಕೆ ಇಲ್ಲ ಎಂದು ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಮಂಗಳವಾರ ಹೇಳಿದ್ದಾರೆ. 

ಮುಂಬೈ: ನನ್ನನ್ನು ಎನ್ ಸಿಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ತೆಗೆದುಹಾಕುವ ಅಧಿಕಾರ ಅಜಿತ್ ಪವಾರ್ ನೇತೃತ್ವದ ಬಂಡಾಯ ಬಣಕ್ಕೆ ಇಲ್ಲ ಎಂದು ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಮಂಗಳವಾರ ಹೇಳಿದ್ದಾರೆ. 

ಎನ್‌ಸಿಪಿಯ ಎಲ್ಲಾ ಶಾಸಕರು(ಒಟ್ಟು 53) ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಇದ್ದಾರೆ ಎಂದು ಜಯಂತ್ ಪಾಟೀಲ್ ಅವರು ತಿಳಿಸಿದ್ದಾರೆ.

ನಿನ್ನೆ ಅಜಿತ್ ಪವಾರ್ ಬಣ, ಜಯಂತ್ ಪಾಟೀಲ್ ಅವರನ್ನು ವಜಾಗೊಳಿಸಿ, ಸುನೀಲ್ ತಟ್ಕರೆ ಅವರನ್ನು ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಅಲ್ಲದೆ ಜಯಂತ್ ಪಾಟೀಲ್ ಮತ್ತು ಜಿತೇಂದ್ರ ಅವ್ಹಾದ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಮನವಿ ಮಾಡಿದೆ.

"ಅಜಿತ್ ಪವಾರ್ ನೇತೃತ್ವದ ಬಣ 'ಕಾಲ್ಪನಿಕ' ಪಕ್ಷವಾಗಿದೆ. ನನ್ನನ್ನು(ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ) ತೆಗೆದುಹಾಕಲು ಅವರಿಗೆ ಯಾವುದೇ ಅಧಿಕಾರ ಇಲ್ಲ" ಎಂದು ಜಯಂತ್ ಪಾಟೀಲ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾದ ಒಂಬತ್ತು ಶಾಸಕರ ವಿರುದ್ಧ ಕ್ರಮ ಕೈಗೊಂಡಿದ್ದೇನೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿಯು ಅಜಿತ್ ಪವಾರ್ ಮತ್ತು ಇತರ ಎಂಟು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಮನವಿ ಸಲ್ಲಿಸಿದೆ ಎಂದು ಜಯಂತ್ ಪಾಟೀಲ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇವ್ರು ಊರುಬಿಟ್ಟು ಊರಿಗೆ ಬಂದು ಆಸ್ತಿ ಮಾಡಬಹುದು, ನಾವು ಮಾಡ್ಬಾರ್ದ? ಪಾರ್ಟ್-2ನಲ್ಲಿ ಏನಿದೆ ಅಂತ ಗೊತ್ತು: HDK ಆರೋಪಕ್ಕೆ CM ಡಿಕೆಶಿ ತಿರುಗೇಟು

'ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡ'; ಟರ್ಕಿಗೆ ಭಾರತ ಖಡಕ್ ಎಚ್ಚರಿಕೆ, ಆಗಿದ್ದೇನು?

11 ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನವವಿವಾಹಿತೆ ಕೆರೆಯಲ್ಲಿ ಶವವಾಗಿ ಪತ್ತೆ, ಪೊಲೀಸ್ ತನಿಖೆ!

ಬರದಿಂದ ಕೆಂಗೆಟ್ಟ ಕರ್ನಾಟಕಕ್ಕೆ ಕೇಂದ್ರದ ನೆರವಿನ ನಿರೀಕ್ಷೆ: ಅಕ್ಟೋಬರ್ 3 ರಿಂದ ಕೇಂದ್ರ ತಂಡದ ಸಮೀಕ್ಷೆ- ಎಚ್.ಡಿ ಕುಮಾರಸ್ವಾಮಿ

ರಷ್ಯಾಗೆ ಮರ್ಮಾಘಾತ; ಪರಮಾಣು ಸಾಮರ್ಥ್ಯದ ಯುದ್ಧವಿಮಾನ ಪತನ-ಬೆಂಕಿಗಾಹುತಿ, 6 ಮಂದಿ ಸಜೀವ ದಹನ, ಓರ್ವ ಪಾರು! Video