ಸುಪ್ರೀಂಕೋರ್ಟ್ 
ದೇಶ

ಎನ್‌ಎಚ್‌ಆರ್‌ಸಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದ ಕೇಂದ್ರಕ್ಕೆ ಸುಪ್ರೀಂ ನೋಟಿಸ್

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ)ದಲ್ಲಿ ಖಾಲಿ ಇರುವ ಮೂರು ಹುದ್ದೆಗಳನ್ನು ಭರ್ತಿ ಮಾಡದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ)ದಲ್ಲಿ ಖಾಲಿ ಇರುವ ಮೂರು ಹುದ್ದೆಗಳನ್ನು ಭರ್ತಿ ಮಾಡದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ಎನ್‌ಎಚ್‌ಆರ್‌ಸಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠ, ಈ ಸಂಬಂಧ ಮೂರು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

ಸೆಪ್ಟೆಂಬರ್ 11, 2021, ಏಪ್ರಿಲ್ 4, 2022 ಮತ್ತು ಜನವರಿ 4, 2023 ರಿಂದ ಈ ಮೂರು ಹುದ್ದೆಗಳು ಖಾಲಿ ಇರುವುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲಿ ಮೂರು ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ನಿರ್ದೇಶನ ನೀಡುವಂತೆ ಕೋರಿ ವಕೀಲ ರಾಧಾಕಾಂತ ತ್ರಿಪಾಠಿ ಅವರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಎನ್‌ಎಚ್‌ಆರ್‌ಸಿಯಲ್ಲಿ ಮೂವರು ಸದಸ್ಯರನ್ನು ನೇಮಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಇದರಿಂದ ಆಯೋಗದ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತಿದೆ. ಇದು ಕಾನೂನು ಮತ್ತು ನ್ಯಾಯದ ಆಡಳಿತದ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ