ಕಪಿಲ್ ಸಿಬಲ್ 
ದೇಶ

ಬಿಜೆಪಿ 5 ಸರ್ಕಾರಗಳನ್ನು ಉರುಳಿಸಿದೆ: ಕಾನೂನು ಅದಕ್ಕೆ ಅವಕಾಶ ನೀಡುತ್ತಾ?

ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್,  ಬಿಜೆಪಿ ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ 5 ವರ್ಷಗಳಲ್ಲಿ 5 ಸರ್ಕಾರಗಳನ್ನು  ಉರುಳಿಸಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ:  ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್,  ಬಿಜೆಪಿ ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ 5 ವರ್ಷಗಳಲ್ಲಿ 5 ಸರ್ಕಾರಗಳನ್ನು  ಉರುಳಿಸಿದೆ.  ಕ್ರಮ ಕೈಗೊಳ್ಳುವುದನ್ನು ಸುಪ್ರೀಂ ಕೋರ್ಟ್ ಗೆ ಬಿಡಲಾಗಿದೆ ಎಂದು ಹೇಳಿದ್ದಾರೆ. 

ಎನ್ ಸಿಪಿ ನಾಯಕ ಅಜಿತ್ ಪವಾರ್ 8 ಶಾಸಕರೊಂದಿಗೆ ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ ಬೆಳವಣಿಗೆ ಹಿನ್ನೆಲೆಯಲ್ಲಿ ಖ್ಯಾತ ವಕೀಲರೂ ಆಗಿರುವ ಸಿಬಲ್ ಈ ಪ್ರತಿಕ್ರಿಯೆ ನೀಡಿದ್ದಾರೆ. 

ದಿಢೀರ್ ಬೆಳವಣಿಗೆಯಲ್ಲಿ ಭಾನುವಾರ ಎನ್ ಸಿಪಿ ನಾಯಕ ಅಜಿತ್ ಪವಾರ್, ಪಕ್ಷದ ವಿರುದ್ಧ ಬಂಡಾಯ ಸಾರಿ 8 ಶಾಸಕರೊಂದಿಗೆ ಬಿಜೆಪಿ-ಶಿವಸೇನೆ (ಶಿಂಧೆ ಬಣ) ಸರ್ಕಾರವನ್ನು ಸೇರಿ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಬಲ್, "ಬಿಜೆಪಿ: ಅಧಿಕಾರದ ಪ್ರಚೋದನೆಯಿಂದ ಉತ್ತರಾಖಂಡ (2016); ಅರುಣಾಚಲ ಪ್ರದೇಶ (2016); ಕರ್ನಾಟಕ (2019); ಮಧ್ಯಪ್ರದೇಶ (2020); ಮಹಾರಾಷ್ಟ್ರ (2022) ಗಳಲ್ಲಿ ಚುನಾಯಿತ ಸರ್ಕಾರಗಳನ್ನು ಕೆಡವಿದೆ. ಇದಕ್ಕೆ ಕಾನೂನು ಒಪ್ಪುತ್ತಾ? ಓವರ್ ಟು ಸುಪ್ರೀಂ ಕೋರ್ಟ್ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಬೆಳವಣಿಗೆಯನ್ನು ಕಪಿಲ್ ಸಿಬಲ್, ಮೊದಲು ಭ್ರಷ್ಟಾಚಾರಿಗಳ ಮೇಲೆ ದಾಳಿ ನಡೆಸಿ ಆ ನಂತರ ಅವರನ್ನೇ ಅಪ್ಪಿಕೊಳ್ಳುವುದು ಎಂದು ವ್ಯಂಗ್ಯವಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT