ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಕೇಂದ್ರದ ಸುಗ್ರೀವಾಜ್ಞೆ ವಿರೋಧಿಸಿ ಒಂದು ವಾರ ಆಮ್ ಆದ್ಮಿ ಪಕ್ಷ ಪ್ರತಿಭಟನೆ

ದೆಹಲಿಯಲ್ಲಿನ ಸೇವೆಗಳ ಮೇಲಿನ ನಿಯಂತ್ರಣಕ್ಕೆ ಸಂಬಂಧಿಸಿದ ಕೇಂದ್ರದ ಸುಗ್ರೀವಾಜ್ಞೆಯ ವಿರುದ್ಧ ಎಎಪಿ ಬುಧವಾರ ರಸ್ತೆಗಿಳಿದಿದ್ದು, ವಿವಾದಾತ್ಮಕ ಆದೇಶದ ಪ್ರತಿಗಳು ಮತ್ತು ಸಾಂಕೇತಿಕ ಪ್ರತಿಕೃತಿಗಳನ್ನು ಸುಟ್ಟುಹಾಕಿತು.

ನವದೆಹಲಿ: ದೆಹಲಿಯಲ್ಲಿನ ಸೇವೆಗಳ ಮೇಲಿನ ನಿಯಂತ್ರಣಕ್ಕೆ ಸಂಬಂಧಿಸಿದ ಕೇಂದ್ರದ ಸುಗ್ರೀವಾಜ್ಞೆಯ ವಿರುದ್ಧ ಎಎಪಿ ಬುಧವಾರ ರಸ್ತೆಗಿಳಿದಿದ್ದು, ವಿವಾದಾತ್ಮಕ ಆದೇಶದ ಪ್ರತಿಗಳು ಮತ್ತು ಸಾಂಕೇತಿಕ ಪ್ರತಿಕೃತಿಗಳನ್ನು ಸುಟ್ಟುಹಾಕಿತು.

'ಕರಾಳ ಸುಗ್ರೀವಾಜ್ಞೆ'ಯ ಪ್ರತಿಗಳು ಮತ್ತು ಸಾಂಕೇತಿಕ ಪ್ರತಿಕೃತಿಗಳನ್ನು ಜುಲೈ 6 ರಿಂದ 13ರವರೆಗೆ ದೆಹಲಿಯ ವಿವಿಧ ಪ್ರದೇಶಗಳು, ಬೀದಿಗಳು ಮತ್ತು ಹಲವೆಡೆ ದಹಿಸಲಾಗುವುದು. ಈ ಮೂಲಕ ಪಕ್ಷವು ಸ್ಪಷ್ಟ ಸಂದೇಶವನ್ನು ರವಾನಿಸಲಿದೆ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ) ಪ್ರಕಟಣೆ ನೀಡಿದೆ.

ಗಮನಾರ್ಹವೆಂದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಆಗ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತ್ತು. ಇದೀಗ, ಮತ್ತೆ ಪ್ರತಿಭಟನೆಯನ್ನು ಆರಂಭಿಸಿದೆ. 

ಆಗ ಪಕ್ಷವು ಈ ವಿಷಯವು ನ್ಯಾಯಾಂಗದ ಅಂಗಳದಲ್ಲಿದೆ ಎಂದು ಹೇಳಿತ್ತು. ಇದೀಗ, ಪ್ರತಿಭಟನೆಯನ್ನು ಏಕೆ ಪುನರಾರಂಭಿಸಲಾಗಿದೆ ಎಂಬುದಕ್ಕೆ ಸ್ಪಷ್ಟ ಕಾರಣ ನೀಡಿಲ್ಲ.

ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂಮಿಯನ್ನು ಹೊರತುಪಡಿಸಿ ದೆಹಲಿಯಲ್ಲಿನ ಸೇವೆಗಳ ಮೇಲಿನ ನಿಯಂತ್ರಣವನ್ನು ಸುಪ್ರೀಂ ಕೋರ್ಟ್ ಚುನಾಯಿತ ಸರ್ಕಾರಕ್ಕೆ ಹಸ್ತಾಂತರಿಸಿದ ಒಂದು ವಾರದ ನಂತರ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಇದು ಗ್ರೂಪ್ ಎ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆ ಪ್ರಕ್ರಿಯೆಗಳಿಗಾಗಿ ರಾಷ್ಟ್ರೀಯ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರವನ್ನು ಸ್ಥಾಪಿಸಿತ್ತು. ಕೇಂದ್ರದ ಈ ನಡೆಯನ್ನು ಎಎಪಿ ಸರ್ಕಾರವು 'ವಂಚನೆ' ಎಂದು ಕರೆದಿದೆ.

ಸುಪ್ರೀಂ ಕೋರ್ಟ್‌ನ ಮೇ 11ರ ತೀರ್ಪಿಗೂ ಮುನ್ನ ದೆಹಲಿ ಸರ್ಕಾರದ ಎಲ್ಲಾ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗಳು ಲೆಫ್ಟಿನೆಂಟ್ ಗವರ್ನರ್ ಅವರ ಕಾರ್ಯನಿರ್ವಾಹಕ ನಿಯಂತ್ರಣದಲ್ಲಿತ್ತು.

ಕೇಜ್ರಿವಾಲ್ ಅವರು ಸುಗ್ರೀವಾಜ್ಞೆಗೆ ವಿರುದ್ಧವಾಗಿ ತಮ್ಮ ಬೆಂಬಲ ಪಡೆಯಲು ಬಿಜೆಪಿಯೇತರ ಪಕ್ಷಗಳ ನಾಯಕರನ್ನು ಸಂಪರ್ಕಿಸುತ್ತಿದ್ದಾರೆ. ಇದರಿಂದಾಗಿ ಅದನ್ನು ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಿದಾಗ ಕೇಂದ್ರದ ಪ್ರಯತ್ನವು ವಿಫಲಗೊಳ್ಳುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ