ರಾಹುಲ್ ಗಾಂಧಿ, ಖರ್ಗೆ, ವೇಣುಗೋಪಾಲ್ ನೇತೃತ್ವದಲ್ಲಿ ಸಭೆ 
ದೇಶ

ರಾಜಸ್ಥಾನ ಚುನಾವಣೆ ಸಿದ್ಧತೆ ಕುರಿತು ಕೈ ವರಿಷ್ಠರ ಸಭೆ: ಪೈಲಟ್ ಹಾಜರಿ, ಗೆಹ್ಲೋಟ್ 'ಗೈರು'

ರಾಜಸ್ಥಾನ ವಿಧಾನಸಭಾ ಚುನಾವಣೆ ಸಿದ್ಧತೆ ಕುರಿತು ಕಾಂಗ್ರೆಸ್ ವರಿಷ್ಠರು ಇಂದು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿನ್ ಪೈಲಟ್ ಮತ್ತು ರಾಜಸ್ಥಾನದ ಹಲವಾರು ಹಿರಿಯ ನಾಯಕರು ಭಾಗವಹಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೈರು ಹಾಜರಿ ಅನೇಕ ಅನುಮಾನಗಳಿಗೆ ಕಾರಣವಾಗಿದೆ. 

ನವದೆಹಲಿ: ರಾಜಸ್ಥಾನ ವಿಧಾನಸಭಾ ಚುನಾವಣೆ ಸಿದ್ಧತೆ ಕುರಿತು ಕಾಂಗ್ರೆಸ್ ವರಿಷ್ಠರು ಇಂದು ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಿನ ತಿಕ್ಕಾಟದ ನಡುವೆ ಪಕ್ಷದ ರಾಜ್ಯ ಘಟಕದಲ್ಲಿ ಹೆಚ್ಚಿನ ಒಗ್ಗಟ್ಟು ತರುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಗುರುವಾರ ರಾಜಸ್ಥಾನದ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ ಸಚಿನ್ ಪೈಲಟ್ ಮತ್ತು ರಾಜಸ್ಥಾನದ ಹಲವಾರು ಹಿರಿಯ ನಾಯಕರು ಭಾಗವಹಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೈರು ಹಾಜರಿ ಅನೇಕ ಅನುಮಾನಗಳಿಗೆ ಕಾರಣವಾಗಿದೆ. 

ಈ ವರ್ಷದ ಕೊನೆಯಲ್ಲಿ ರಾಜಸ್ಥಾನ ವಿಧಾನಸಭಾ ಚುನಾವಣೆ ನಡೆಯಲಿದೆ. ಕಳೆದ ನಾಲ್ಕೂವರೆ ವರ್ಷಗಳಿಂದ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದರೆ, ಗೆಹ್ಲೋಟ್ ಮತ್ತು ಪೈಲಟ್ ನಡುವಿನ ಭಿನ್ನಾಭಿಪ್ರಾಯದಿಂದಾಗಿ ರಾಜ್ಯದಲ್ಲಿ ಮತ್ತೊಂದು ಅವಧಿಗೆ ಅಧಿಕಾರವನ್ನು ಪಡೆಯುವುದು ಕಾಂಗ್ರೆಸ್‌ಗೆ ಕಷ್ಟಕರವಾಗಿದೆ. ಪೈಲಟ್ 2020 ರಲ್ಲಿ ಗೆಹ್ಲೋಟ್ ವಿರುದ್ಧ ಬಂಡಾಯವೆದ್ದ ನಂತರ ಉಪಮುಖ್ಯಮಂತ್ರಿ ಮತ್ತು ಪಕ್ಷದ ರಾಜ್ಯಾಧ್ಯಕ್ಷ  ಸ್ಥಾನಗಳನ್ನು ಕಳೆದುಕೊಂಡರು.

ಗೆಹ್ಲೋಟ್ ಅವರನ್ನು ಪಕ್ಷದ ಮುಖ್ಯಸ್ಥರನ್ನಾಗಿ ಮಾಡಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಎಐಸಿಸಿ ಯೋಜಿಸಿತ್ತು. ಅದಕ್ಕಾಗಿ ಕಳೆದ ವರ್ಷ ನಡೆದಿದ್ದ ಪಕ್ಷದ ಶಾಸಕಾಂಗ ಸಭೆಯನ್ನು ಮುಖ್ಯಮಂತ್ರಿ ಪರ ಬೆಂಬಲಿಗರು ವಿಫಲಗೊಳಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT