ದೇಶ

ಪ್ರಜಾಪ್ರಭುತ್ವವಲ್ಲ, ತಮಾಷೆ; ಕಾನೂನು ಇದಕ್ಕೆ ಅವಕಾಶ ಮಾಡಿಕೊಟ್ಟಿದೆ: ಮಹಾರಾಷ್ಟ್ರ ಬೆಳವಣಿಗೆ ಬಗ್ಗೆ ಕಪಿಲ್ ಸಿಬಲ್ ಕಿಡಿ

Shilpa D

ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಇತ್ತೀಚೆಗೆ ಸುನಾಮಿ ಎದ್ದಿದೆ. ಅದ್ರಲ್ಲೂ ಅಜಿತ್ ಪವಾರ್ ಎನ್‌ಸಿಪಿ ನಾಯಕ ಶರದ್ ಪವಾರ್‌ಗೆ ಕೈಕೊಟ್ಟು ಬಿಜೆಪಿ ಮತ್ತು ಶಿವಸೇನೆ ಸರ್ಕಾರದ ಕೈಹಿಡಿದ ಬಳಿಕ ಅಲ್ಲೋಲ, ಕಲ್ಲೋಲ ಸೃಷ್ಟಿಯಾಗಿದೆ.

ಮಹಾರಾಷ್ಟ್ರ ಬೆಳವಣಿಗೆಗಳ ಬಗ್ಗೆ ರಾಜ್ಯ ಸಭಾ ಸದಸ್ಯ ಕಪಿಲ್ ಸಿಬಲ್ ಕಿಡಿಕಾರಿದ್ದಾರೆ, ಈ ಸಂಬಂಧ ಟ್ವೀಟ್ ಮಾಡಿರುವ ಅವರು,  ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ತಮಾಷೆಯಾಗಿದ್ದು, ಕಾನೂನು ಅದಕ್ಕೆ ಅವಕಾಶ ಮಾಡಿಕೊಟ್ಟಂತಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವುದಿ ಜನರಿಗಾಗಿ ಅಲ್ಲ, ಬದಲಿಗೆ ಅಧಿಕಾರದ ಆಸೆಗಾಗಿ ಎಂದು ಟ್ವಿಟ್ ನಲ್ಲಿ ಬರೆದುಕೊಂಡಿದ್ದಾರೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ ಮತ್ತು ಇತರ ಎಂಟು ಮಂದಿ ಶಾಸಕರು ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡ ನಂತರ ವಕೀಲರಾದ ಸಿಬಲ್ ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ರಾಜ್ಯದ ಸಿಎಂ ಆಗುವ ಹಂಬಲ ಹೊಂದಿರುವುದಾಗಿ ಹೇಳಿದ್ದಾರೆ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ 83 ವರ್ಷವಾಗಿದ್ದು, ಸಕ್ರಿಯ ರಾಜಕೀಯದಿಂದ ನಿವೃತ್ತಿ ಯಾವಾಗ ಎಂದು ಪ್ರಶ್ನಿಸಿದ್ದರು.

SCROLL FOR NEXT