ನರೇಂದ್ರ ಮೋದಿ 
ದೇಶ

2024ರ ಲೋಕಸಭೆ ಚುನಾವಣೆ: ತಮಿಳುನಾಡಿನಿಂದ ಪ್ರಧಾನಿ ಮೋದಿ ಸ್ಪರ್ಧೆ?

2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಮತ್ತು ವಾರಣಾಸಿಯಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ.

ನವದೆಹಲಿ: 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಮತ್ತು ವಾರಣಾಸಿಯಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ. ದಕ್ಷಿಣ ಭಾರತದಲ್ಲಿ ಪಕ್ಷವನ್ನು ಮುಂಚೂಣಿಗೆ ತರುವ ಉದ್ದೇಶದಿಂದ ಪ್ರಧಾನಿ ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮೋದಿ ಅವರು ತಮಿಳುನಾಡಿನಿಂದಲೂ ಸ್ಪರ್ಧಿಸಿದರೆ ಆಶ್ಚರ್ಯವೇನಿಲ್ಲ.  ತಮಿಳುನಾಡಿನ ಜೊತೆ ಅವರ ರಾಜಕೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೆಲವು ತಿಂಗಳ ಹಿಂದೆ ಅ ಕಾಶಿ-ತಮಿಳು ಸಂಗಮಮ್ ಕಾರ್ಯಕ್ರಮ ನಡೆಸಲಾಯಿತು ಎಂದು ಹಿರಿಯ ರಾಜಕೀಯ ವಿಶ್ಲೇಷಕ ಪಿ ಕೆ ಡಿ ನಂಬಿಯಾರ್ ವಿಶ್ಲೇಷಿಸಿದ್ದಾರೆ. ಮೋದಿಯವರು ಕನ್ಯಾಕುಮಾರಿಯಿಂದ ಸ್ಪರ್ಧಿಸಿದರೆ, ಕಾಶಿ ಮತ್ತು ಕನ್ಯಾಕುಮಾರಿ ನಡುವಿನ ಬಲವಾದ ಸಾಂಸ್ಕೃತಿಕ ಸಂಬಂಧವು ಕಾರ್ಯರೂಪಕ್ಕೆ ಬರುತ್ತದೆ ಎಂಬುದು ಮತ್ತೊಂದು ಅಭಿಪ್ರಾಯ.

ಕಾಶಿ ಮತ್ತು ಕನ್ಯಾಕುಮಾರಿಯಿಂದ ಸ್ಪರ್ಧಿಸುವುದು ಪ್ರಧಾನಿ ಸ್ಥಾನಕ್ಕೆ ಸೂಕ್ತವಾಗಿರುತ್ತದೆ ಎಂದು ಕೆಲವು ಅಭಿಪ್ರಾಯ ಪಟ್ಟಿದ್ದಾರೆ ಎಂದು ಬಿಜೆಪಿಯ ಆಪ್ತ ಮೂಲವೊಂದು ತಿಳಿಸಿದೆ.  ಕನ್ಯಾಕುಮಾರಿ ಬದಲಿಗೆ ಕೊಯಮತ್ತೂರು ಕ್ಷೇತ್ರವನ್ನು ಪ್ರಧಾನಿ ಆಯ್ಕೆ ಮಾಡಿಕೊಳ್ಳುವ ಬಗ್ಗೆಯೂ ಊಹಾಪೋಹಗಳು ಹರಿದಾಡುತ್ತಿವೆ.

ಕನ್ಯಾಕುಮಾರಿಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಬಿಜೆಪಿ ಅಭ್ಯರ್ಥಿ ಪೊನ್ ರಾಧಾಕೃಷ್ಣನ್ ಅವರು 2021 ರ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ವಿಜಯ್‌ಕುಮಾರ್ ವಿರುದ್ಧ ನೇರಾನೇರಾ ಫೈಟ್ ಕೊಟ್ಟಿದ್ದರು. ಬಿಜೆಪಿ 4,38,087 ಮತಗಳನ್ನು ಪಡೆದರೆ, ಕಾಂಗ್ರೆಸ್ 5,76,037 ಮತಗಳನ್ನು ಪಡೆದಿತ್ತು.

ಕೊಯಮತ್ತೂರಿನಲ್ಲಿ ಬಿಜೆಪಿಯ ಕೊಯಮತ್ತೂರು ದಕ್ಷಿಣದ ಶಾಸಕ ವನತಿ ಶ್ರೀನಿವಾಸನ್ ಇದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿಯ ಸಿಪಿ ರಾಧಾಕೃಷ್ಣನ್ ಅವರು 3,92,007 ಮತಗಳನ್ನು ಪಡೆದರು, ಸಿಪಿಎಂನ ಪಿಆರ್ ನಟರಾಜನ್ ಅವರು 5,71,150 ಮತಗಳನ್ನು ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT