ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಹೈಕೋರ್ಟ್ ತೀರ್ಪು: ಸುಪ್ರೀಂ ಕೋರ್ಟ್ ಮೊರೆ ಹೋಗಲು ಕಾಂಗ್ರೆಸ್ ನಿರ್ಧಾರ

ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲಿನ ಸಂಸದ ಸ್ಥಾನ ಅನರ್ಹತೆ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದ್ದು ಇದರಿಂದ ಕಾಂಗ್ರೆಸ್ ನಾಯಕನಿಗೆ ತೀವ್ರ ಹಿನ್ನಡೆಯಾಗಿದೆ.

ನವದೆಹಲಿ: ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲಿನ ಸಂಸದ ಸ್ಥಾನ ಅನರ್ಹತೆ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದ್ದು ಇದರಿಂದ ಕಾಂಗ್ರೆಸ್ ನಾಯಕನಿಗೆ ತೀವ್ರ ಹಿನ್ನಡೆಯಾಗಿದೆ.

ಗುಜರಾತ್ ಹೈಕೋರ್ಟ್ ತೀರ್ಪು ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ನಂತರ ತೀರ್ಪಿನ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.

ನ್ಯಾಯಾಧೀಶರ ವಾದವನ್ನು ಅಧ್ಯಯನ ಮಾಡಲಾಗುತ್ತಿದ್ದು, ಈ ವಿಷಯವನ್ನು ಮುಂದೆ ತೆಗೆದುಕೊಂಡು ಹೋಗಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಅನರ್ಹತೆಯ ಕುರಿತು ಗುಜರಾತ್ ಹೈಕೋರ್ಟ್‌ನ ಏಕಸದಸ್ಯ ಪೀಠದ ತೀರ್ಪನ್ನು ಅಧ್ಯಯನ ಮಾಡಲಾಗುತ್ತಿದೆ. ಡಾ. ಅಭಿಷೇಕ್ ಸಿಂಘ್ವಿ ಅವರು ಇಂದು ಅಪರಾಹ್ನ ಮಾಧ್ಯಮಗಳ ಮುಂದೆ ವಿವರವಾಗಿ ತಿಳಿಸಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. 

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಇದನ್ನು "ನ್ಯಾಯದ ವಿಡಂಬನೆ" ಎಂದು ಬಣ್ಣಿಸಿದ್ದಾರೆ."ನೀರವ್ ಮೋದಿ, ಅಮಿ ಮೋದಿ, ನೀಶಾಲ್ ಮೋದಿ, ಮೆಹುಲ್ ಚೋಕ್ಸಿ ಮತ್ತು ಇತರ 'ಬ್ಯಾಂಕ್ ವಂಚಕರನ್ನು' ಶಿಕ್ಷಿಸುವ ಬದಲು, ವಂಚನೆ ಮತ್ತು ಸಾರ್ವಜನಿಕ ಹಣವನ್ನು ಲಪಟಾಯಿಸುವ ವಂಚಕರ ಕೆಟ್ಟ ಕೆಲಸಗಳನ್ನು ಬಹಿರಂಗಪಡಿಸುವವರನ್ನು ಶಿಕ್ಷಿಸಲಾಗುತ್ತಿದೆ ಎಂದು ಸುರ್ಜೇವಾಲಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರು ಸತ್ಯ, ಸದಾಚಾರ, ನಿರ್ಭಯತೆ ಮತ್ತು ಅಧಿಕಾರದ ಕೋಟೆಯಲ್ಲಿರುವವರಿಂದ ಉತ್ತರದಾಯಿತ್ವದ ಮಾರ್ಗವನ್ನು ಆರಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. 

ನಾವು ಸತ್ಯ ಮತ್ತು ಸದಾಚಾರದ ಹಾದಿಯಲ್ಲಿ ನಡೆಯುತ್ತೇವೆ, ಏನೇ ಬಂದರೂ... ಸತ್ಯಮೇವ ಜಯತೇ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT