ಸಿಎಂ ಏಕನಾಥ್ ಶಿಂಧೆ 
ದೇಶ

ಕುತೂಹಲ ಮೂಡಿಸಿದ ಮಹಾರಾಷ್ಟ್ರ ಸಿಎಂ ಶಿಂಧೆ-ಠಾಕ್ರೆ ಭೇಟಿ

ಮಹಾರಾಷ್ಟ್ರದಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹೆಚ್ಚು ಮಹತ್ವ ಪಡೆದುಕೊಳ್ಳುತ್ತಿವೆ. 

ಮುಂಬೈ: ಮಹಾರಾಷ್ಟ್ರದಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹೆಚ್ಚು ಮಹತ್ವ ಪಡೆದುಕೊಳ್ಳುತ್ತಿವೆ. 

ಶಿವಸೇನೆ (ಉದ್ಧವ್ ಠಾಕ್ರೆ ಬಣ)ದ ಸಂಸದ ಸಂಜಯ್ ರೌತ್ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಇಬ್ಬರೂ ಸಹೋದರರಾಗಿರುವ ಕಾರಾಣ ಅವರ ನಡುವಿನ ಹೊಂದಾಣಿಕೆಗೆ ಯಾರದ್ದೇ ಮಧ್ಯಸ್ಥಿಕೆಯೂ ಬೇಡ ಎಂದು ಹೇಳಿದ್ದ ಬೆನ್ನಲ್ಲೆ ರಾಜ್ ಠಾಕ್ರೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ ಮಾಡಿದ್ದಾರೆ.

ಸಂಜಯ್ ರೌತ್ ಹೇಳಿಕೆ ಬೆನ್ನಲ್ಲೇ ರಾಜ್ ಠಾಕ್ರೆ ಸಿಎಂ ಶಿಂಧೆಯನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.  ಇದಕ್ಕೂ ಮುನ್ನ ಮಹಾರಾಷ್ಟ್ರ ಸರ್ಕಾರಕ್ಕೆ ಎನ್ ಸಿಪಿ ಸದಸ್ಯರು ಬೆಂಬಲ ನೀಡಿ ಒಳಗೆ ಬಂದಿರುವುದಕ್ಕೆ ಶಿವಸೇನೆ (ಶಿಂಧೆ ಬಣ)ಯ ಶಾಸಕರಲ್ಲಿ ಆತಂಕ ಮೂಡಿರಬಹುದು ಹಾಗೂ ಶಿಂಧೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂಬ ವರದಿಗಳ ಬಗ್ಗೆ ಸಿಎಂ ಶಿಂಧೆ ಸ್ಪಷ್ಟನೆ ನೀಡಿ ಇವೆಲ್ಲವೂ ವದಂತಿಗಳಷ್ಟೇ ಎಂದು ಹೇಳಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!