ಬ್ರಿಜ್ ಭೂಷಣ್ ಶರಣ್ ಸಿಂಗ್ 
ದೇಶ

ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್‌ ಸಿಂಗ್‌ಗೆ ದೆಹಲಿ ನ್ಯಾಯಾಲಯ ಸಮನ್ಸ್

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ಸಮನ್ಸ್ ನೀಡಿದ್ದು, ಅವರ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಿದೆ.

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ಸಮನ್ಸ್ ನೀಡಿದ್ದು, ಅವರ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಿದೆ.

ಚಾರ್ಜ್ ಶೀಟ್ ಅನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರು ಜುಲೈ 18 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಿಂಗ್ ಅವರಿಗೆ ಸೂಚಿಸಿದರು.

ಇದರೊಂದಿಗೆ, ಭಾರತ ಕುಸ್ತಿ ಫೆಡರೇಶನ್‌ನ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್‌ಗೆ ಸಹ ನ್ಯಾಯಾಲಯ ಸಮನ್ಸ್ ನೀಡಿದೆ.

ಇಬ್ಬರೂ ಆರೋಪಿಗಳ ವಿರುದ್ಧ ಸಮನ್ಸ್ ಜಾರಿಗೊಳಿಸುವಂತೆ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ನಿರ್ದೇಶನ ನೀಡಿದೆ.

ಆರೋಪಿಗಳಿಬ್ಬರೂ ದೆಹಲಿಯಲ್ಲಿ ನೆಲೆಸಿದ್ದಾರೆ ಎಂಬುದನ್ನು ಗಮನಿಸಿದ ನ್ಯಾಯಾಧೀಶರು, ಸಮೀಪದ ದಿನಾಂಕವನ್ನು ನೀಡುತ್ತಿರುವುದಾಗಿ ಹೇಳಿದರು.

ಐಪಿಸಿ ಸೆಕ್ಷನ್ 354, 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವಿಕೆ) ಮತ್ತು 506 (ಕ್ರಿಮಿನಲ್ ಬೆದರಿಕೆ ) ಅಡಿಯಲ್ಲಿ ದೆಹಲಿ ಪೊಲೀಸರು ಜೂನ್ 15 ರಂದು ಆರು ಬಾರಿ ಸಂಸದರಾಗಿರುವ ಸಿಂಗ್ ವಿರುದ್ಧ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದರು.

ತೋಮರ್ ವಿರುದ್ಧ ಐಪಿಸಿಯ ಸೆಕ್ಷನ್ 109 (ಯಾವುದೇ ಅಪರಾಧಕ್ಕೆ ಕುಮ್ಮಕ್ಕು ನೀಡುವುದು ಮತ್ತು ಶಿಕ್ಷೆಗೆ ಯಾವುದೇ ಸ್ಪಷ್ಟವಾದ ಅವಕಾಶ ನೀಡದಿದ್ದರೆ), 354, 354A ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸದ್ಯ ಪ್ರಕರಣದ ಹೊರತಾಗಿ, ಅಪ್ರಾಪ್ತ ಕುಸ್ತಿಪಟು ಮಾಡಿದ ಆರೋಪಗಳ ಪ್ರಕಾರ ಸಿಂಗ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ದಾಖಲಿಸಲಾಗಿದೆ.

ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ಏಳು ಮಹಿಳಾ ಕುಸ್ತಿಪಟುಗಳಲ್ಲಿ ಆಕೆಯೂ ಸೇರಿದ್ದಳು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT