ಮಣಿಪುರ ಹಿಂಸಾಚಾರ 
ದೇಶ

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ: ಇಂಫಾಲ್‌ನಲ್ಲಿ ಗುಂಡಿನ ದಾಳಿ, ವಾಹನಗಳಿಗೆ ಬೆಂಕಿ

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಗುಂಪೊಂದು ಎರಡು ವಾಹನಗಳಿಗೆ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಗುಂಪೊಂದು ಎರಡು ವಾಹನಗಳಿಗೆ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಐತಿಹಾಸಿಕ ಕಂಗ್ಲಾ ಕೋಟೆ ಬಳಿಯ ಮಹಾಬಲಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಒಂದು ನಿರ್ದಿಷ್ಟ ಸಮುದಾಯಕ್ಕೆ ಗೃಹೋಪಯೋಗಿ ವಸ್ತುಗಳನ್ನು ಸಾಗಿಸಲು ನಾಲ್ಕು ಚಕ್ರಗಳ ವಾಹನಗಳನ್ನು ಬಳಸಲಾಗುತ್ತಿದೆ ಎಂದು ಶಂಕಿಸಿ ಜನರ ಗುಂಪೊಂದು ಎರಡು ಖಾಸಗಿ ವಾಹನಗಳನ್ನು ಸುಟ್ಟು ಹಾಕಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸರು ಮಧ್ಯ ಪ್ರವೇಶಿಸಿ ಗುಂಪು ಚದುರಿಸಿದ್ದು, ಎರಡೂ ವಾಹನಗಳ ಚಾಲಕರು ಪರಾರಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಇನ್ನು ಶುಕ್ರವಾರ ತಡರಾತ್ರಿ ಇಂಫಾಲ್ ಪಶ್ಚಿಮ ಜಿಲ್ಲೆಯ ಯಂಗಂಗ್‌ಪೋಕ್ಪಿ ಬಳಿಯ ಲೈಕೋಟ್‌ನಲ್ಲಿ ಎರಡು ಸಮುದಾಯಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಬಿಷ್ಣುಪುರ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಮಣಿಪುರ ಪೊಲೀಸ್ ಕಮಾಂಡೋ ಸೇರಿದಂತೆ ನಾಲ್ವರು ಗುಂಡಿಕ್ಕಿ ಹತ್ಯೆ ಮಾಡಿದ ನಂತರ ಈ ಘಟನೆಗಳು ಸಂಭವಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT