ವಂದೇ ಭಾರತ್ ಎಕ್ಸ್ ಪ್ರೆಸ್ 
ದೇಶ

ವಂದೇ ಭಾರತ್ ಸೇರಿ ಎಲ್ಲಾ ರೈಲುಗಳ ಎಸಿ ಚೇರ್ ಕಾರ್, ಎಕ್ಸಿಕ್ಯೂಟಿವ್ ಟಿಕೆಟ್ ದರ ಶೇ. 25 ರವರೆಗೆ ಕಡಿತ

ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್‌ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್‌ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್‌ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು...

ನವದೆಹಲಿ: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್‌ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್‌ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್‌ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು ಕಡಿತಗೊಳಿಸಲಾಗುವುದು ಎಂದು ರೈಲ್ವೆ ಮಂಡಳಿಯ ಆದೇಶ ಹೊರಡಿಸಿದೆ.

ಈ ದರಗಳು ಸಹ ಸ್ಪರ್ಧಾತ್ಮಕ ಸಾರಿಗೆ ವಿಧಾನಗಳ ಮೇಲೆ ಅವಲಂಬಿತವಾಗಿರುತ್ತದೆ.

ಲಭ್ಯವಿರುವ ಸ್ಥಾನಗಳ ಬಳಕೆಯನ್ನು ಉತ್ತಮಗೊಳಿಸುವ ದೃಷ್ಟಿಯಿಂದ, ರೈಲ್ವೆ ಸಚಿವಾಲಯವು ರೈಲ್ವೆ ವಲಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಿಗೆ ಎಸಿ ಚೇರ್ ಕಾರ್ ರೈಲುಗಳಲ್ಲಿ ರಿಯಾಯಿತಿ ದರದ ಯೋಜನೆಗಳನ್ನು ಪರಿಚಯಿಸುವ ಅಧಿಕಾರ ನೀಡಲು ನಿರ್ಧರಿಸಿದೆ.

"ಈ ಯೋಜನೆಯು ಅನುಭೂತಿ ಮತ್ತು ವಿಸ್ಟಾಡೋಮ್ ಕೋಚ್‌ಗಳು ಸೇರಿದಂತೆ ಎಸಿ ಆಸನ ಸೌಕರ್ಯಗಳನ್ನು ಹೊಂದಿರುವ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ ಗಳಿಗೆ ಅನ್ವಯಿಸುತ್ತದೆ" ಎಂದು ರೈಲ್ವೆ ಮಂಡಳಿಯ ಆದೇಶದಲ್ಲಿ ತಿಳಿಸಿದೆ.

"ರಿಯಾಯಿತಿಯೂ ಮೂಲ ದರದಲ್ಲಿ ಗರಿಷ್ಠ ಶೇ. 25 ವರೆಗೆ ಇರುತ್ತದೆ. ರಿಸರ್ವೆಷನ್ ಶುಲ್ಕ, ಸೂಪರ್ ಫಾಸ್ಟ್ ಸರ್ಚಾರ್ಜ್, ಜಿಎಸ್ಟಿ, ಇತ್ಯಾದಿಗಳಂತಹ ಇತರ ಶುಲ್ಕಗಳನ್ನು ಪ್ರತ್ಯೇಕವಾಗಿ ವಿಧಿಸಲಾಗುತ್ತದೆ. 

ಆಕ್ಯುಪೆನ್ಸೀ ಶೇಕಡಾ 50 ಕ್ಕಿಂತ ಕಡಿಮೆಯಿದ್ದರೆ ಯಾವುದೇ ರೈಲು ಅಥವಾ ಎಲ್ಲಾ ವರ್ಗಗಳಲ್ಲಿ ರಿಯಾಯಿತಿಯನ್ನು ಒದಗಿಸಬಹುದು ಎಂದು ರೈಲ್ವೆ ಮಂಡಳಿ ಸ್ಪಷ್ಟವಾಗಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ಬಾಲಿವುಡ್ ಚಿತ್ರರಂಗದಿಂದ ಬ್ಯಾನ್: ನಟ ರಣವೀರ್ ಸಿಂಗ್ ಪ್ರತಿಕ್ರಿಯಿಸಿದ್ದು ಹೀಗೆ..

SCROLL FOR NEXT