ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಮ್ಮು ಮತ್ತು ಕಾಶ್ಮೀರ: ದಿಢೀರ್ ಪ್ರವಾಹದಿಂದ ನದಿಯಲ್ಲಿ ಕೊಚ್ಚಿಹೋಗಿದ್ದ ಇಬ್ಬರು ಸೈನಿಕರ ಮೃತದೇಹಗಳು ಪತ್ತೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಹಠಾತ್ ಪ್ರವಾಹದಿಂದ ಕೊಚ್ಚಿ ಹೋಗಿದ್ದ ಇಬ್ಬರು ಯೋಧರ ಮೃತದೇಹಗಳನ್ನು ಭಾನುವಾರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಗ್ರಹ ಚಿತ್ರ
Ramyashree GN
Updated On : 9 Jul 2023, 12:40 pm

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಹಠಾತ್ ಪ್ರವಾಹದಿಂದ ಕೊಚ್ಚಿ ಹೋಗಿದ್ದ ಇಬ್ಬರು ಯೋಧರ ಮೃತದೇಹಗಳನ್ನು ಭಾನುವಾರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾ ಸಿಬ್ಬಂದಿ ಶನಿವಾರ ಸುರನ್‌ಕೋಟೆ ಪ್ರದೇಶದ ಡೋಗ್ರಾ ನಾಲೆಯನ್ನು ದಾಟುತ್ತಿದ್ದಾಗ ಬಲವಾದ ಪ್ರವಾಹಕ್ಕೆ ಸಿಲುಕಿ ಅವರು ಕೊಚ್ಚಿಹೋಗಿದ್ದರು ಎಂದು ಅವರು ಹೇಳಿದರು.

ಶನಿವಾರ ರಾತ್ರಿ ನೈಬ್ ಸುಬೇದಾರ್ ಕುಲದೀಪ್ ಸಿಂಗ್ ಅವರ ಮೃತದೇಹವನ್ನು ಹೊಳೆಯಿಂದ ಹೊರತೆಗೆಯಲಾಗಿದ್ದು, ಎರಡನೇ ಯೋಧನ ಮೃತದೇಹವನ್ನು ಭಾನುವಾರ ಹೊರತೆಗೆಯಲಾಗಿದೆ.

Advertisement

Advertisement

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ: ಅಮರನಾಥ್ ಯಾತ್ರೆ ತಾತ್ಕಾಲಿಕ ಸ್ಥಗಿತ, ಪೋಶನಾ ನದಿಯಲ್ಲಿ ಕೊಚ್ಚಿಹೋದ ಇಬ್ಬರು ಸೈನಿಕರು

ಮೃತರಲ್ಲಿ ಒಬ್ಬರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement