ಸಾಂದರ್ಭಿಕ ಚಿತ್ರ 
ದೇಶ

ಮುಂಬೈ: 6,000 ಕೆಜಿ ತೂಕದ ಕಬ್ಬಿಣದ ಸೇತುವೆ ಕಳ್ಳತನ, ನಾಲ್ವರ ಬಂಧನ

ಮಲಾಡ್ ನಲ್ಲಿ 6,000 ಕೆಜಿ ತೂಕದ ಕಬ್ಬಿಣದ ಸೇತುವೆ ಕಳ್ಳತನ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ದ ಕಬ್ಬಿಣದ ಸಂಪೂರ್ಣ ಬೆಲೆ ಸುಮಾರು 2 ಲಕ್ಷ ರೂಪಾಯಿ ಎಂದು ಹಿರಿಯ ಪೊಲೀಸ್ ಅಧಿಕಾರಿ ಬಂಗೂರ್ ನಗರ ಪಿಎಸ್ ಪ್ರಮೋದ ತಾವಡೆ ತಿಳಿಸಿದ್ದಾರೆ.

ಮುಂಬೈ:  ಮಲಾಡ್ ನಲ್ಲಿ 6,000 ಕೆಜಿ ತೂಕದ ಕಬ್ಬಿಣದ ಸೇತುವೆ ಕಳ್ಳತನ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ದ ಕಬ್ಬಿಣದ ಸಂಪೂರ್ಣ ಬೆಲೆ ಸುಮಾರು 2 ಲಕ್ಷ ರೂಪಾಯಿ ಎಂದು ಹಿರಿಯ ಪೊಲೀಸ್ ಅಧಿಕಾರಿ ಬಂಗೂರ್ ನಗರ ಪಿಎಸ್ ಪ್ರಮೋದ ತಾವಡೆ ತಿಳಿಸಿದ್ದಾರೆ.

ಜೂನ್ 26 ರಂದು ಅದಾನಿ ಕಂಪನಿಯಿಂದ ದೊಡ್ಡ ವಿದ್ಯುತ್ ತಂತಿಗಳನ್ನು ಸಾಗಿಸಲು ಚರಂಡಿಯ ಮೇಲೆ ನಿರ್ಮಿಸಲಾದ ಸೇತುವೆ ಕಳವು ಆಗಿದೆ  ಎಂದು ದೂರು ಸ್ವೀಕರಿಸಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ನಾಲ್ವರನ್ನು ಬಂಧಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು. 

ಕದ್ದ ಸೇತುವೆ ಹಳೆಯ ಸೇತುವೆಯಾಗಿದ್ದು, ಅಲ್ಲಿ ಹೊಸ ಸೇತುವೆ ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬರು ಸೇತುವೆ ನಿರ್ಮಾಣದ ಗುತ್ತಿಗೆ ಪಡೆದ ಸಂಸ್ಥೆಯ ಉದ್ಯೋಗಿಯಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!

585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ವಿತರಣೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಗಜಿನಿ, ಲಗಾನ್ ಚಿತ್ರದಲ್ಲಿ ನಟಿಸಿದ್ದ ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ಅಶ್ಲೀಲ ಜೋಕ್‌ಗಳು ಸ್ವೀಕಾರಾರ್ಹವಲ್ಲ; ಉದಯನಿಧಿ ವಿರುದ್ಧದ ಪೊಲೀಸರ ಕ್ರಮ ಸರಿಯಾಗಿದೆ: ನಟಿ ಕಂಗನಾ ರಣಾವತ್

ದ್ವೇಷ ಭಾಷಣ: ಪಿಎಫ್‌ಐ ನಾಯಕನಿಗೆ ಆರು ತಿಂಗಳು ಜೈಲು ಶಿಕ್ಷೆ