ನವದೆಹಲಿ: ಐಐಟಿ ದೆಹಲಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 4 ನೇ ವರ್ಷದ ಬಿಟೆಕ್ ವಿದ್ಯಾರ್ಥಿ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉತ್ತರ ಪ್ರದೇಶದ ಬರೇಲಿಯ ಆಯುಷ್ (20) ಮೃತ ವಿದ್ಯಾರ್ಥಿಯಾಗಿದ್ದು, ಶನಿವಾರ ಮಧ್ಯರಾತ್ರಿ 12 ಗಂಟೆಗೆ ಈ ಘಟನೆ ನಡೆದಿದೆ.
ಉದಯಗಿರಿಯಲ್ಲಿರುವ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಆತನ ಸಾವಿಗೆ ಕಾರಣ ಏನೆಂಬುದು ಈ ವರೆಗೂ ತಿಳಿದುಬಂದಿಲ್ಲ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.