ಮಹಿಳಾ ಶಿಕ್ಷಕಿಯರ ವಿರುದ್ಧ ದೂರು (ಸಂಗ್ರಹ ಚಿತ್ರ) 
ದೇಶ

ಮಹಾರಾಷ್ಟ್ರ: ವಿದ್ಯಾರ್ಥಿಗಳಿಗೆ ಥಳಿತ ಆರೋಪ, ಮಹಿಳಾ ಶಿಕ್ಷಕಿಯರ ವಿರುದ್ಧ ದೂರು

ವಿದ್ಯಾರ್ಥಿಗಳಿಗೆ ಥಳಿಸಿದ ಆರೋಪದ ಮೇರೆಗೆ ಮಹಿಳಾ ಶಿಕ್ಷಕಿಯರ ವಿರುದ್ಧ ದೂರು ದಾಖಲಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಥಾಣೆ: ವಿದ್ಯಾರ್ಥಿಗಳಿಗೆ ಥಳಿಸಿದ ಆರೋಪದ ಮೇರೆಗೆ ಮಹಿಳಾ ಶಿಕ್ಷಕಿಯರ ವಿರುದ್ಧ ದೂರು ದಾಖಲಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಥಾಣೆಯ ಉಲ್ಲಾಸನಗರದಲ್ಲಿ ಈ ಘಟನೆ ನಡೆದಿದ್ದು, ತರಗತಿ ವೇಳೆ ವಿದ್ಯಾರ್ಥಿಗಳನ್ನು ಬೆಂಚ್‌ ಮೇಲೆ ನಿಲ್ಲಿಸಿ ಕಬ್ಬಿಣ ಪಟ್ಟಿಯಿಂದ ಥಳಿಸಿದ್ದಕ್ಕೆ ಇಲ್ಲಿಯ ಖಾಸಗಿ ಶಾಲೆಯೊಂದರ ಇಬ್ಬರು ಮಹಿಳಾ ಶಿಕ್ಷಕಿಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಜುಲೈ 5 ರಂದು ಉಲ್ಲಾಸನಗರದ ಶಾಲೆಯ ಐದನೇ ತರಗತಿಯ 10 ವಿದ್ಯಾರ್ಥಿಗಳು ಶುಲ್ಕದ ಬಗ್ಗೆ ಘೋಷಣೆಯ ಪತ್ರಗಳನ್ನು ಮತ್ತು ಅವರ ಪೋಷಕರು ಸಹಿ ಮಾಡಿದ ಪೋಷಕರ ಶಿಕ್ಷಕರ ಸಂಘ (ಪಿಟಿಎ) ಸದಸ್ಯತ್ವ ದಾಖಲೆಯನ್ನು ತಂದಿರಲಿಲ್ಲ. ಹೀಗಾಗಿ ಕಬ್ಬಿಣದ ಪಟ್ಟಿಯಿಂದ ಶಿಕ್ಷಕಿಯೊಬ್ಬರು ಥಳಿಸಿದ್ದಾರೆ. ಪರಿಣಾಮ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಮತ್ತೊಬ್ಬ ಶಿಕ್ಷಕಿ ಕೂಡ 12 ವರ್ಷದ ಬಾಲಕನಿಗೆ ಥಳಿಸಿದ್ದಾರೆ. ಆರೋಪಿ ಶಿಕ್ಷಕರೊಬ್ಬರು ಸ್ಟೀಲ್ ರೂಲರ್‌ನಿಂದ 10 ವಿದ್ಯಾರ್ಥಿಗಳ ಕೈಗೆ ಹೊಡೆದಿದ್ದು ಅವರಿಗೆ ಗಾಯಗಳಾಗಿವೆ ಎಂದು ಹಿಲ್ ಲೈನ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಅಲ್ಲದೆ ವಿದ್ಯಾರ್ಥಿಗಳನ್ನು ತರಗತಿ ಮುಗಿಯುವವರೆಗೂ ಬೆಂಚ್‌ ಮೇಲೆ ನಿಲ್ಲುವಂತೆ ಒತ್ತಾಯಿಸಿದ್ದರು ಎಂದು ಸಂತ್ರಸ್ತ ವಿದ್ಯಾರ್ಥಿಯ ತಂದೆ ಮಾಹಿತಿ ನೀಡಿದ್ದಾರೆ. ಪೋಷಕರ ದೂರಿನ ಮೇರೆಗೆ ಶುಕ್ರವಾರ ಇಬ್ಬರು ಶಿಕ್ಷಕಿಯರ ಮೇಲೆ ಸೆಕ್ಷನ್‌ 75ರ ಅಡಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಶಿಕ್ಷೆಗೆ ಕಾರಣವೇನು ಎಂಬುದನ್ನು ನಿಖರವಾಗಿ ಉಲ್ಲೇಖಿಸಿಲ್ಲ. ಯಾರನ್ನೂ ಬಂಧಿಸಲಾಗಿಲ್ಲ, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್