ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: 2020ರ ಬಳಿಕ ದೇಶದಲ್ಲಿ ದಾಖಲೆ ಮಟ್ಟಕ್ಕೆ ಕೊರೋನಾ ಸೋಂಕು ಕುಸಿತ!

ದೇಶದಲ್ಲಿ ಅಟ್ಟಹಾಸ ಮೆರೆದಿದ್ದ ಕೋವಿಡ್ ಸೋಂಕು ಇದೀಗ ದಾಖಲೆ ಮಟ್ಟಕ್ಕೆ ಕುಸಿದಿದ್ದು, ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಕೇವಲ 24 ಹೊಸ ಸೋಂಕು ಪ್ರಕರಣಹಗಳು ಮಾತ್ರ ದಾಖಲಾಗಿದೆ.

ನವದೆಹಲಿ: ದೇಶದಲ್ಲಿ ಅಟ್ಟಹಾಸ ಮೆರೆದಿದ್ದ ಕೋವಿಡ್ ಸೋಂಕು ಇದೀಗ ದಾಖಲೆ ಮಟ್ಟಕ್ಕೆ ಕುಸಿದಿದ್ದು, ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಕೇವಲ 24 ಹೊಸ ಸೋಂಕು ಪ್ರಕರಣಹಗಳು ಮಾತ್ರ ದಾಖಲಾಗಿದೆ.

ಹೌದು.. ಕಳೆದ 24 ಗಂಟೆಯಲ್ಲಿ 24 ಹೊಸ ಸೋಂಕ ಪ್ರಕರಣಗಳು ಮಾತ್ರ ವರದಿಯಾಗಿದ್ದು, ಇದು 2020ರ ಬಳಿಕ ದೇಶದಲ್ಲಿ ದಾಖಲಾದ ಅತ್ಯಂತ ಕನಿಷ್ಟ ಸೋಂಕು ಪ್ರಕರಣಗಳ ಸಂಖ್ಯೆ ಇದಾಗಿದೆ. ಒಟ್ಟಾರೆ ಕೋವಿಡ್ ಪ್ರಕರಣಗಳ ಸಂಖ್ಯೆ 4.49 ಕೋಟಿ (4,49,94,599) ರಷ್ಟಿದೆ. ಕೇರಳದಲ್ಲಿ 2020ರ ಜನವರಿಯಲ್ಲಿ ಕೋವಿಡ್ ವೈರಸ್‌ನ ಮೊದಲ ಪ್ರಕರಣ ವರದಿಯಾಗಿತ್ತು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಇನ್ನು ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಗಣನೀಯ ಪ್ರಮಾಣ ಕುಸಿತವಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,431ಕ್ಕೆ ಕುಸಿತವಾಗಿದೆ. ಅಂತೆಯೇ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 5,31,913ರಷ್ಟಿದೆ. ರಾಷ್ಟ್ರೀಯ COVID-19 ಚೇತರಿಕೆ ದರವು 98.81 ಪ್ರತಿಶತಕ್ಕೆ ಏರಿಕೆಯಾಗಿದ್ದು, ಸಾವಿನ ಪ್ರಮಾಣವು ಶೇಕಡಾ 1.18 ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ವೆಬ್‌ಸೈಟ್ ನಲ್ಲಿ ಮಾಹಿತಿ ನೀಡಿದೆ.

ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,44,61,255 ಕ್ಕೆ ಏರಿದ್ದು, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 220.66 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT