ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ 
ದೇಶ

ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಜುಲೈ 24 ರವರೆಗೆ ಸುಪ್ರೀಂಕೋರ್ಟ್​ ವಿಸ್ತರಿಸಿದೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಜುಲೈ 24 ರವರೆಗೆ ಸುಪ್ರೀಂಕೋರ್ಟ್​ ವಿಸ್ತರಿಸಿದೆ.

ವೈದ್ಯಕೀಯ ಕಾರಣಗಳಿಗಾಗಿ ಸತ್ಯೇಂದ್ರ ಜೈನ್ ಅವರಿಗೆ ಜಾಮೀನು ನೀಡಲಾಗಿತ್ತು. ನ್ಯಾ. ಎಎಸ್ ಬೋಪಣ್ಣ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ಜೈನ್ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರಿಗೆ ವೈದ್ಯಕೀಯ ವರದಿಗಳನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರಿಗೆ ಸಲ್ಲಿಸುವಂತೆ ಸೂಚಿಸಿದೆ.

ಸಂಕ್ಷಿಪ್ತ ವಿಚಾರಣೆಯ ಸಂದರ್ಭದಲ್ಲಿ,  ಸಿಂಘ್ವಿ ಮೂರು ಆಸ್ಪತ್ರೆಗಳು ಜೈನ್‌ಗೆ ಶಸ್ತ್ರಚಿಕಿತ್ಸೆಗೆ ಶಿಫಾರಸು ಮಾಡಿವೆ,

ವೈದ್ಯಕೀಯ ಕಾರಣಗಳಿಗಾಗಿ ಮೇ 26 ರಂದು ಜೈನ್ ಅವರಿಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿದ್ದ ಸುಪ್ರೀಂಕೋರ್ಟ್​, ತನ್ನ ಸ್ವಂತ ಖರ್ಚಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ತನ್ನ ಇಚ್ಛೆಯ ಚಿಕಿತ್ಸೆಯನ್ನು ಪಡೆಯುವ ಹಕ್ಕು ನಾಗರಿಕನಿಗೆ ಇದೆ ಎಂದು ಹೇಳಿದೆ.

ಕಳೆದ ವರ್ಷ ಮೇ 30 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತ್ಯೇಂದ್ರ ಜೈನ್ ಅವರನ್ನು ಬಂಧನಕ್ಕೊಳಪಡಿಸಿತ್ತು. ನಾಲ್ಕು ಕಂಪನಿಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಜೈನ್ ಅವರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT