ಶರದ್ ಪವಾರ್ - ಅಜಿತ್ ಪವಾರ್ 
ದೇಶ

ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ; ಶರದ್ ಪವಾರ್ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ ಅಜಿತ್ ಪವಾರ್

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಬಂಡಾಯವೆದ್ದು, ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ ಅವರು ಆಗಸ್ಟ್ 1 ರಂದು ಪುಣೆಯಲ್ಲಿ ಲೋಕಮಾನ್ಯ ತಿಲಕ್ ಸ್ಮಾರಕ ಟ್ರಸ್ಟ್‌ನ ಪ್ರಶಸ್ತಿ...

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಬಂಡಾಯವೆದ್ದು, ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ ಅವರು ಆಗಸ್ಟ್ 1 ರಂದು ಪುಣೆಯಲ್ಲಿ ಲೋಕಮಾನ್ಯ ತಿಲಕ್ ಸ್ಮಾರಕ ಟ್ರಸ್ಟ್‌ನ ಪ್ರಶಸ್ತಿ ಸಮಾರಂಭದಲ್ಲಿ ತಮ್ಮ ಚಿಕ್ಕಪ್ಪನ ಜೊತೆ ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಇದೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ಪ್ರಶಸ್ತಿ ನೀಡಲಾಗುತ್ತಿದ್ದು, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ವರ್ಷದ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ಪ್ರಶಸ್ತಿ ನೀಡಲಾಗುವುದು ಎಂದು ಲೋಕಮಾನ್ಯ ತಿಲಕ್ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷ ಡಾ.ದೀಪಕ್ ತಿಲಕ್ ಅವರು ಹೇಳಿದ್ದಾರೆ.

ಪುಣೆಯ ತಿಲಕ್ ಮಹಾರಾಷ್ಟ್ರ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಲೋಕಮಾನ್ಯ ತಿಲಕರ ಪುಣ್ಯತಿಥಿಯಾದ ಆಗಸ್ಟ್ 1ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

"ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಸಮಾಜಕ್ಕೆ ಅಸಾಧಾರಣ ಕೊಡುಗೆಗಳನ್ನು ನೀಡಿದವರನ್ನು ಗುರುತಿಸಿ ನೀಡಲಾಗುತ್ತದೆ. ಈ ಪ್ರಶಸ್ತಿಯು ಸ್ಮರಣಿಕೆ ಮತ್ತು ಪ್ರಮಾಣಪತ್ರದ ಜೊತೆಗೆ, 1 ಲಕ್ಷ ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿದೆ.

ಈ ಕಾರ್ಯಕ್ರಮಕ್ಕೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಇತರ ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ಲೋಕಮಾನ್ಯ ತಿಲಕ್ ಸ್ಮಾರಕ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ