ದೇಶ

ಲಖಿಂಪುರ ಖೇರಿ ಪ್ರಕರಣ: ಆಶಿಶ್ ಮಿಶ್ರಾ ಮಧ್ಯಂತರ ಜಾಮೀನು ವಿಸ್ತರಿಸಿದ ಸುಪ್ರೀಂ ಕೋರ್ಟ್

Lingaraj Badiger

ನವದೆಹಲಿ: 2021ರ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್‌ ಅವರ ಮಧ್ಯಂತರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಸೆಪ್ಟೆಂಬರ್ 26 ರವರೆಗೆ ವಿಸ್ತರಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ದೀಪಂಕರ್ ದತ್ತ ಅವರ ಪೀಠ, ಪ್ರಕರಣದ ವಿಚಾರಣೆಯನ್ನು ಗಮನಿಸಿ, ಆರೋಪಿ ಆಶಿಶ್ ಮಿಶ್ರಾ ಜಾಮೀನು ಅವಧಿಯನ್ನು ವಿಸ್ತರಿಸಿದೆ.

ಜನವರಿ 25 ರಂದು ಸುಪ್ರೀಂ ಕೋರ್ಟ್, ಆರೋಪಿ ಆಶಿಶ್ ಮಿಶ್ರಾಗೆ ಎಂಟು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು ಮತ್ತು ಉತ್ತರ ಪ್ರದೇಶ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶಕ್ಕೆ ಭೇಟಿ ನೀಡದಂತೆ ಷರತ್ತು ವಿಧಿಸಿತ್ತು.

ಅಕ್ಟೋಬರ್ 3, 2021 ರಂದು, ಅಂದಿನ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಲಖಿಂಪುರ ಖೇರಿ ಭೇಟಿಯ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಹಿಂಸಾಚಾರ ಭುಗಿಲೆದ್ದು ಎಂಟು ಜನ ಸಾವನ್ನಪ್ಪಿದ್ದರು.

SCROLL FOR NEXT