ಪುಲ್ವಾಮಾದಲ್ಲಿ ದಾಳಿ ನಡೆಸಿರುವ ಎನ್ಐಎ. 
ದೇಶ

ಭಯೋತ್ಪಾದನೆಗೆ ಸಂಚು ಪ್ರಕರಣ: ದಕ್ಷಿಣ ಕಾಶ್ಮೀರದ 5 ಸ್ಥಳಗಳಲ್ಲಿ ಎನ್‌ಐಎ ದಾಳಿ

ಭಯೋತ್ಪಾದಕ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ದಕ್ಷಿಣ ಕಾಶ್ಮೀರದ ಐದು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ.

ನವದೆಹಲಿ: ಭಯೋತ್ಪಾದಕ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ದಕ್ಷಿಣ ಕಾಶ್ಮೀರದ ಐದು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ.

ನಿಷೇಧಿತ ಭಯೋತ್ಪಾದಕ ಸಂಘಟನೆಗಳು ಜಮ್ಮು ಮತ್ತು ಕಾಶ್ಮೀರದ ಸೂಕ್ಷ್ಮ ಪ್ರದೇಶಗಳಲ್ಲಿ ಬಾಂಬ್‌ಗಳು, ಸುಧಾರಿತ ಸ್ಫೋಟಕ ಸಾಧನಗಳು (ಐಇಡಿ) ಮತ್ತು ಸಣ್ಣ ಶಸ್ತ್ರಾಸ್ತ್ರಗಳೊಂದಿಗೆ ದಾಳಿ ನಡೆಸಲು ಸಂಚು ರೂಪಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಎನ್ಐಎ ಪ್ರಕರಣದ ತನಿಖೆ ನಡೆಸಲು ಆರಂಭಿಸಿದೆ. ಪ್ರಕರಣ ಸಂಬಂಧ ಮೇ ತಿಂಗಳಿನಲ್ಲಿ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್, ಶೋಪಿಯಾನ್, ಪುಲ್ವಾಮಾ, ಶ್ರೀನಗರ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ 13 ಸ್ಥಳಗಳನ್ನು ಎನ್‌ಐಎ ಶೋಧಿಸಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕದಡಲು ಸ್ಥಳೀಯ ಯುವಕರು ಮತ್ತು ಭಯೋತ್ಪಾದಕ ಸಂಘಟನೆಗಳೊಂದಿಗೆ ಕೈಜೋಡಿಸಿದ್ದು, ಸಂಚು ರೂಪಿಸುತ್ತಿವೆ ಎಂದು ಎನ್ಐಎ ಹೇಳಿತ್ತು.

ಇದಕ್ಕೂ ಮುನ್ನ, ಜೂನ್ 26 ರಂದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಳೆದ ವರ್ಷ ಏಜೆನ್ಸಿ ದಾಖಲಿಸಿದ ಭಯೋತ್ಪಾದನೆ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಅನೇಕ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT