ದೇಶ

ಬಂಗಾಳ ಪಂಚಾಯತ್‌ ಚುನಾವಣೆ ಫಲಿತಾಂಶ: 3,700ಕ್ಕೂ ಹೆಚ್ಚು ಸ್ಥಾನಗಳಲ್ಲಿ ಟಿಎಂಸಿ ಗೆಲುವು

Lingaraj Badiger

ಕೋಲ್ಕತ್ತಾ: ಪಶ್ಚಿಮ ಬಂಗಾಳ ಗ್ರಾಮ ಪಂಚಾಯತ್ ಚುನಾವಣೆ ಮಂಗಳವಾರ ಪ್ರಕಟವಾಗುತ್ತಿದ್ದು, ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಆಡಳಿತರೂಢ ತೃಣಮೂಲ ಕಾಂಗ್ರೆಸ್ 3,700ಕ್ಕೂ  ಗ್ರಾಮ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 3,167 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ರಾಜ್ಯಾದ್ಯಂತ ಒಟ್ಟು 63,229 ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿಪಕ್ಷ ಬಿಜೆಪಿ ಕೇವಲ 673 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಮತ್ತು 782 ಕಡೆ ಮುನ್ನಡೆ ಸಾಧಿಸಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ 241 ಸ್ಥಾನಗಳನ್ನು ಗೆದ್ದಿದೆ ಮತ್ತು ಪ್ರಸ್ತುತ 627 ಗ್ರಾಮ ಪಂಚಾಯತ್(ಜಿಪಿ) ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅದರ ಮಿತ್ರಪಕ್ಷ ಕಾಂಗ್ರೆಸ್ 107 ಸ್ಥಾನಗಳನ್ನು ಗೆದ್ದಿದ್ದು, 241 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಗ್ರಾಮ ಪಂಚಾಯಿತಿ ಸ್ಥಾನಗಳಲ್ಲದೆ 9,730 ಪಂಚಾಯಿತಿ ಸಮಿತಿ ಮತ್ತು 928 ಜಿಲ್ಲಾ ಪರಿಷತ್ ಸ್ಥಾನಗಳನ್ನು ಒಳಗೊಂಡಂತೆ ಸುಮಾರು 74,000 ಪಂಚಾಯತ್ ಸ್ಥಾನಗಳಿಗೆ ನಡೆದ ಮೂರು ಹಂತದ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT