ಮಣಿಪುರದ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ 
ದೇಶ

ಎಎಫ್ಎಸ್ ಪಿಎ ಇಲ್ಲದೇ ಮಣಿಪುರದಲ್ಲಿ ಪರಿಸ್ಥಿತಿ ನಿಯಂತ್ರಿಸುವುದಕ್ಕೆ ಹರಸಾಹಸಪಡುತ್ತಿರುವ ಭದ್ರತಾಪಡೆಗಳು!

ಮಣಿಪುರದಲ್ಲಿ ಹಿಂಸಾಚಾರ ತಹಬದಿಗೆ ತರಲು ಸೇನಾಪಡೆಗಳು ಅವಿರತ ಶ್ರಮಿಸುತ್ತಿವೆ. ಆದರೆ ಸೇನಾಪಡೆಗಳಿಗೆ ವಿಶೇಷಾಧಿಕಾರ ಇಲ್ಲದೇ ಕಾರ್ಯಾಚರಣೆ ನಡೆಸುವುದು ಕಷ್ಟ ಸಾಧ್ಯವಾಗುತ್ತಿದೆ.

ಮಣಿಪುರ: ಮಣಿಪುರದಲ್ಲಿ ಹಿಂಸಾಚಾರ ತಹಬದಿಗೆ ತರಲು ಸೇನಾಪಡೆಗಳು ಅವಿರತ ಶ್ರಮಿಸುತ್ತಿವೆ. ಆದರೆ ಸೇನಾಪಡೆಗಳಿಗೆ ವಿಶೇಷಾಧಿಕಾರ ಇಲ್ಲದೇ ಕಾರ್ಯಾಚರಣೆ ನಡೆಸುವುದು ಕಷ್ಟ ಸಾಧ್ಯವಾಗುತ್ತಿದೆ. 

19 ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಬರುವ ಪ್ರದೇಶಗಳನ್ನು ಪ್ರಕ್ಷುಬ್ಧ ಪ್ರದೇಶಗಳೆಂದು ಗುರುತಿಸಲಾಗಿದ್ದು, ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕಾದರೆ ಮ್ಯಾಜಿಸ್ಟ್ರೇಟ್ ಒಬ್ಬರ ಉಪಸ್ಥಿತಿ ಇರಲೇಬೇಕೆಂದು ಆಗ್ರಹಿಸುತ್ತಿವೆ.  ತಮ್ಮ ವಿರುದ್ಧದ ಸುಳ್ಳು ಆರೋಪಗಳು ಬಾರದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಆಗ್ರಹವನ್ನು ಸೇನಾ ಅಧಿಕಾರಿಗಳು ಮುಂದಿಟ್ಟಿದ್ದಾರೆ. 

19 ಪೊಲೀಸ್ ಠಾಣೆಗಳ ವ್ಯಾಪ್ತಿಯನ್ನು ಮಣಿಪುರದಲ್ಲಿ ಎಎಫ್ಎಸ್ ಪಿಎ ವ್ಯಾಪ್ತಿಯಿಂದ ಹೊರಗಿಡಲಾಗಿದೆ.  ಎಎಫ್ಎಸ್ ಪಿಎ ಸೇನಾಪಡೆಗಳಿಗೆ  ಸಂಘರ್ಷದ ಪ್ರದೇಶಗಳಲ್ಲಿ ವಿಶೇಷ ಅಧಿಕಾರವನ್ನು ನೀಡುತ್ತದೆ.  ಮಣಿಪುರದಲ್ಲಿ 2022 ರ ಏಪ್ರಿಲ್ ನಲ್ಲಿ 15 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಎಎಫ್ಎಸ್ ಪಿಎ ಯನ್ನು ತೆಗೆದುಹಾಕಲಾಗಿತ್ತು. ಇದರೊಂದಿಗೆ ಈ ವರ್ಷ ಮಾರ್ಚ್ ನಲ್ಲಿ ಮತ್ತೆ 4 ಠಾಣೆಗಳ ವ್ಯಾಪ್ತಿಯಲ್ಲಿ ಎಎಫ್ಎಸ್ ಪಿಎಯನ್ನು ಹಿಂಪಡೆಯಲಾಗಿತ್ತು.

ಈ ಪ್ರದೇಶಗಳು ಮುಖ್ಯವಾಗಿ ಇಂಫಾಲ್ ಕಣಿವೆಯಲ್ಲಿವೆ ಮತ್ತು ತೊಂದರೆಗೊಳಗಾದ ಪ್ರದೇಶ ಕಾಯಿದೆಯು ಈ ವರ್ಷದ ಏಪ್ರಿಲ್‌ನಿಂದ ಇನ್ನೂ ಆರು ತಿಂಗಳ ಕಾಲ ರಾಜ್ಯದ ಇತರ ಭಾಗಗಳಲ್ಲಿ ಜಾರಿಯಲ್ಲಿರುತ್ತದೆ.

ಅಧಿಕಾರಿಗಳ ಪ್ರಕಾರ, ಸೇನಾಪಡೆಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿರಾಧಾರ ಆರೋಪ ಮಾಡಲಾಗುತ್ತಿದ್ದು, ಆರೋಪಿತ ದೌರ್ಜನ್ಯಗಳ ಬಗ್ಗೆ ಸೂಕ್ತ ಸಾಕ್ಷ್ಯಾಧಾರ ನೀಡುವಂತೆ ಕೇಳಿದ್ದ ಮಣಿಪುರ ಬಾರ್ ಅಸೋಸಿಯೇಷನ್ ಹೇಳಿಕೆಯ ಬಗ್ಗೆ ತೀವ್ರ ಸ್ಥಳೀಯರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT