ಸಾಂದರ್ಭಿಕ ಚಿತ್ರ 
ದೇಶ

ಜನಕ ರಾಜನ ಪುತ್ರಿ 'ಸೀತಾಮಾತೆ' ಅಪ್ರತಿಮ ಸುಂದರಿ: ಹೀಗಾಗಿ ರಾಮ, ರಾವಣ ಹುಚ್ಚರಂತೆ ಆಕೆ ಹಿಂದೆ ಬಿದ್ದಿದ್ದರು!

ಸೀತಾ ಮಾತೆ ಬಹಳ ಸುಂದರವಾಗಿದ್ದಳು. ಆಕೆ ಅದೆಷ್ಟು ಸುಂದರವಾಗಿದ್ದಳು ಎಂದರೆ ರಾಮ ಹಾಗೂ ರಾವಣ ಇಬ್ಬರೂ ಆಕೆಯನ್ನೂ ನೋಡಿ ಹುಚ್ಚರಾಗಿದ್ದರು. ಸೀತೆ ಸುಂದರವಾಗಿದ್ದ ಕಾರಣಕ್ಕೆ ರಾಮ ಹಾಗೂ ರಾವಣರ ನಡುವೆ ಯುದ್ಧ ನಡೆದಿತ್ತು.

ಜೈಪುರ:ರಾಮ, ರಾವಣ ಮತ್ತು ಸೀತಾ ಕುರಿತು ರಾಜಸ್ಥಾನ ಸಚಿವರೊಬ್ಬರು ನೀಡಿದ ಹೇಳಿಕೆಯು ವಿವಾದ ಸೃಷ್ಟಿಸಿದೆ.  ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರದ ಸೇನಾ ಕಲ್ಯಾಣ ಖಾತೆಯ ರಾಜ್ಯ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಪ್ರತಿ ಬಾರಿ ಸುದ್ದಿಯಲ್ಲಿರುತ್ತಾರೆ.

ಜುಂಜುನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಸಚಿವ ರಾಜೇಂದ್ರ ಸಿಂಗ್ ಗುಢಾ ಅವರು, ರಾಮ  ಮತ್ತು  ರಾವಣ ಅವರು ಹುಚ್ಚರಂತೆ ಸೀತಾ  ಮಾತೆ ಹಿಂದೆ ಬಿದ್ದಿದ್ದರು. ಅದರರ್ಥ ಜನಕ ರಾಜನ ಪುತ್ರಿ ಸೀತಾ ಮಾತೆ ಅಷ್ಟೊಂದು ಸುಂದರಿಯಾಗಿದ್ದಳು ಎಂದು ಹೇಳಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೀತಾ ಮಾತೆ ಬಹಳ ಸುಂದರವಾಗಿದ್ದಳು. ಆಕೆ ಅದೆಷ್ಟು ಸುಂದರವಾಗಿದ್ದಳು ಎಂದರೆ ರಾಮ ಹಾಗೂ ರಾವಣ ಇಬ್ಬರೂ ಆಕೆಯನ್ನೂ ನೋಡಿ ಹುಚ್ಚರಾಗಿದ್ದರು. ಸೀತೆ ಸುಂದರವಾಗಿದ್ದ ಕಾರಣಕ್ಕೆ ರಾಮ ಹಾಗೂ ರಾವಣರ ನಡುವೆ ಯುದ್ಧ ನಡೆದಿತ್ತು' ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ.

ರಾಮ ಹಾಗೂ ರಾವಣ ಇಬ್ಬರೂ ಉತ್ತಮ ವ್ಯಕ್ತಿಗಳು. ಆದರೆ, ಇಬ್ಬರೂ ಕೂಡ ಸೀತಾ ಮಾತೆಗೆ ಹುಚ್ಚರಾಗಿದ್ದರು. ನಿಜಕ್ಕೂ ಸೀತಾ ಮಾತೆ ಸುಂದರವಾಗಿದ್ದಳು. ಇದನ್ನೂ ಯಾರೂ ಕೂಡ ಊಹಿಸಲು ಸಾಧ್ಯವಿಲ್ಲ' ಎಂದು ಶಾಸಕ ರಾಜೇಂಧ್ರ ಸಿಂಗ್‌ ಗುಧಾ ಹೇಳಿದ್ದಾರೆ. ಅಷ್ಟಕ್ಕೆ ನಿಲ್ಲದ ಅವರು, ತಮ್ಮನ್ನೇ ಸೀತಾ ಮಾತೆಗೆ ಹೋಲಿಸಿಕೊಂಡಿದ್ದಾರೆ. ನನ್ನಲ್ಲಿರುವ ಗುಣಗಳ ಕಾರಂದಿಂದಾಗಿಯೇ ಮುಖ್ಯಮಂತ್ರಿ ಅಶೋಕ್‌ ಗೆಹ್ಲೊಟ್‌ ಹಾಗೂ ಸಚಿನ್ ಪೈಲಟ್‌ ಇಬ್ಬರಿಗೂ ನಾನು ಬೇಕಾಗಿದ್ದೇನೆ ಎಂದಿದ್ದಾರೆ.

ಈ ಕಾಂಗ್ರೆಸ್ಸಿಗರು ಹಿಂದೂಗಳನ್ನು ಗೇಲಿ ಮಾಡಲು ಮತ್ತು ಅವರ ಮತ ಬ್ಯಾಂಕ್ ರಾಜಕೀಯವನ್ನು ಇನ್ನಷ್ಟು ಗಟ್ಟಿಮಾಡಲು ಮತ್ತೆಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ? ಭಗವಾನ್ ಶ್ರೀರಾಮನ ಮೇಲಿನ ಭಾರತದ ನಂಬಿಕೆಯನ್ನು ಹುಚ್ಚ ಎಂದು ಬಣ್ಣಿಸಿದ್ದಾರೆ, ರಾಜಸ್ಥಾನ ಸರ್ಕಾರದ ಸಚಿವ ರಾಜೇಂದ್ರ ಗೂಢಾ ಅವರಿಗೆ ಸ್ವಂತ ಅಸ್ತಿತ್ವದ ಬಗ್ಗೆ ನಾಚಿಕೆಯಾಗಲಿಲ್ಲವೇ? ಇದು ಉದ್ದೇಶಪೂರ್ವಕ ಹೇಳಿಕೆ. ಇಂತಹ ಹೇಳಿಕೆಗಳಿಂದಾಗಿ ಇಂದು ಕಾಂಗ್ರೆಸ್ ಪರಿಸ್ಥಿತಿ ಶೂರ್ಪನಖಿ  ಪರಿಸ್ಥಿತಿಗೆ ಬಂದು ತಲುಪಿದೆ ಎಂದು ಬಿಜೆಪಿ ಹರಿಹಾಯ್ದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!