ಅಮರನಾಥ ಯಾತ್ರಿಕರು 
ದೇಶ

ಅಮರನಾಥ ಯಾತ್ರೆ: 36 ಗಂಟೆಗಳಲ್ಲಿ ಐವರು ಯಾತ್ರಿಕರ ಸಾವು, ಮೃತರ ಸಂಖ್ಯೆ 24ಕ್ಕೆ ಏರಿಕೆ

ಅಮರನಾಥ ಯಾತ್ರೆಯಲ್ಲಿ ಯಾತ್ರಾರ್ಥಿಗಳ ಸಾವು ಮುಂದುವರೆದಿದೆ. ಕಳೆದ 36 ಗಂಟೆಗಳಲ್ಲಿ ಐವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಈ ವರ್ಷದ ಯಾತ್ರೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಕಾಶ್ಮೀರ: ಅಮರನಾಥ ಯಾತ್ರೆಯಲ್ಲಿ ಯಾತ್ರಾರ್ಥಿಗಳ ಸಾವು ಮುಂದುವರೆದಿದೆ. ಕಳೆದ 36 ಗಂಟೆಗಳಲ್ಲಿ ಐವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಈ ವರ್ಷದ ಯಾತ್ರೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ಬೆಳಿಗ್ಗೆಯಿಂದ ಸಾವನ್ನಪ್ಪಿದ ಐವರ  ಪೈಕಿ ಒಬ್ಬ ಸಾಧು ಸೇರಿದ್ದಾರೆ. ಹೆಚ್ಚಿನ ಯಾತ್ರಿಕರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಯಾತ್ರೆಯ ಪಹಲ್ಗಾಮ್ ಅಕ್ಷದಲ್ಲಿ ನಾಲ್ಕು ಜನರು ಸಾವನ್ನಪ್ಪಿದರೆ, ಬಾಲ್ಟಾಲ್ ಮಾರ್ಗದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಯಾತ್ರಿಕರು ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ ಮತ್ತು ಗುಜರಾತ್‌ಗೆ ಸೇರಿದವರಾಗಿದ್ದಾರೆ. ಒಬ್ಬರ ಗುರುತು ಪತ್ತೆಯಾಗಿಲ್ಲ.

ಬಲಿಯಾದವರಲ್ಲಿ ಯಾತ್ರಾ ಕರ್ತವ್ಯದಲ್ಲಿ ನಿಯೋಜಿಸಲಾದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಅಧಿಕಾರಿ, ಒಬ್ಬ ಸಾಧು ಮತ್ತು ಸೇವಾದಾರ್ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎತ್ತರದ ಪ್ರದೇಶಗಳಲ್ಲಿ ಆಮ್ಲಜನಕ ಪ್ರಮಾಣ ಕಡಿಮೆಯಿದೆ. ಇದರಿಂದಾಗಿ ಹೃದಯ ಸ್ತಂಭನ ಉಂಟಾಗುತ್ತಿದ್ದು, ಅಮರನಾಥ ಯಾತ್ರಿಕರು ಮತ್ತು ಅಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಸಾವಿನ ಸಾಮಾನ್ಯ ಕಾರಣಗಳಲ್ಲಿ ಒಂದಾಗಿದೆ ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT