ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್‌ನ ಮಾಜಿ ಗೃಹ ಸಚಿವ ವಿಪುಲ್ ಚೌಧರಿಗೆ 7 ವರ್ಷ ಜೈಲು ಶಿಕ್ಷೆ

ಮಹಾರಾಷ್ಟ್ರಕ್ಕೆ ಜಾನುವಾರುಗಳ ಮೇವು ಪೂರೈಕೆ ಮೂಲಕ ಡೈರಿಗೆ ವಂಚನೆ ಮತ್ತು 22.5 ಕೋಟಿ ರೂ. ನಷ್ಟಕ್ಕೆ ಗುಜರಾತ್‌ನ ಮಾಜಿ ಸಚಿವ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ಮಾಜಿ ಅಧ್ಯಕ್ಷರು ಮತ್ತು ದೂಧ್‌ಸಾಗರ್ ಡೈರಿಯ ಮಾಜಿ ಅಧ್ಯಕ್ಷರಾದ ವಿಪುಲ್ ಚೌಧರಿ ಕಾರಣ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಅಹಮದಾಬಾದ್: 2014ರಲ್ಲಿ ಸರಿಯಾದ ಪ್ರಕ್ರಿಯೆಗಳನ್ನು ಅನುಸರಿಸದೆ ಮಹಾರಾಷ್ಟ್ರಕ್ಕೆ ಜಾನುವಾರುಗಳ ಮೇವು ಪೂರೈಕೆ ಮೂಲಕ ಡೈರಿಗೆ ವಂಚನೆ ಮತ್ತು 22.5 ಕೋಟಿ ರೂ. ನಷ್ಟಕ್ಕೆ ಕಾರಣರಾದ ಗುಜರಾತ್‌ನ ಮಾಜಿ ಸಚಿವ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ (ಜಿಸಿಎಂಎಂಎಫ್) ಮಾಜಿ ಅಧ್ಯಕ್ಷರು ಮತ್ತು ದೂಧ್‌ಸಾಗರ್ ಡೈರಿಯ ಮಾಜಿ ಅಧ್ಯಕ್ಷರಾದ ವಿಪುಲ್ ಚೌಧರಿ ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಮೆಹ್ಸಾನಾ ನ್ಯಾಯಾಲಯವು ಗುರುವಾರ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಮೆಹ್ಸಾನಾದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವೈಆರ್ ಅಗರವಾಲ್ ಅವರು ಚೌಧರಿ ಮತ್ತು ಇತರ 14 ಮಂದಿ ಐಪಿಸಿ ಸೆಕ್ಷನ್ 420 ರ ಅಡಿಯಲ್ಲಿ ವಂಚನೆ ಮಾಡಿದ್ದಾರೆ. ಹೀಗಾಗಿ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದರು.

ಪಬ್ಲಿಕ್ ಪ್ರಾಸಿಕ್ಯೂಟರ್ ವಿಜಯ್ ಬರೋಟ್ ಮಾಧ್ಯಮಗಳೊಂದಿಗೆ ಮಾತನಾಡಿ, 'ಡೈರಿ ವಂಚನೆಗೆ ಸಂಬಂಧಿಸಿದಂತೆ 2014 ರಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು 22 ಪ್ರತಿವಾದಿಗಳಿದ್ದರು ಮತ್ತು ಅವರಲ್ಲಿ ಮೂವರು ವಿಚಾರಣೆಯ ಸಮಯದಲ್ಲಿ ಸತ್ತರು. 1996 ರಲ್ಲಿ, ಗುಜರಾತಿನ ಸಹಕಾರಿ ಕ್ಷೇತ್ರದ ಪ್ರಮುಖ ವ್ಯಕ್ತಿಯಾಗಿದ್ದ ಚೌಧರಿ ಅವರು, ಶಂಕರ ಸಿನ್ಹ ವಘೇಲಾ ಸಂಪುಟದಲ್ಲಿ ಗೃಹ ಖಾತೆಯ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT