ಪ್ರಧಾನಿ ಮೋದಿ 
ದೇಶ

ಚಂದ್ರಯಾನ-3 ಭಾರತದ ಬಾಹ್ಯಾಕಾಶ ಚರಿತ್ರೆಯಲ್ಲಿ ಹೊಸ ಅಧ್ಯಾಯ ಬರೆದಿದೆ: ಪ್ರಧಾನಿ ಮೋದಿ

ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿಗೊಳಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ವಿಜ್ಞಾನಿಗಳ ಪರಿಶ್ರಮ ಮತ್ತು ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ನವದೆಹಲಿ: ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿಗೊಳಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ವಿಜ್ಞಾನಿಗಳ ಪರಿಶ್ರಮ ಮತ್ತು ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಚಂದ್ರಯಾನ-3 ಭಾರತದ ಬಾಹ್ಯಾಕಾಶ ಚರಿತ್ರೆಯಲ್ಲಿ ಹೊಸ ಅಧ್ಯಾಯ ಬರೆದಿದೆ. ಇದು ಎತ್ತರಕ್ಕೆ ಸಾಗುತ್ತಾ, ಪ್ರತಿ ಭಾರತೀಯನ ಕನಸು ಹಾಗೂ ಮಹತ್ವಾಕಾಂಕ್ಷೆಯನ್ನು ಮೇಲೆ ಕೊಂಡೊಯ್ಯುತ್ತಿದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ಅವಿರತ ಬದ್ಧತೆಗೆ ಸಾಕ್ಷಿ. ಅವರ ಉತ್ಸಾಹ ಮತ್ತು ದಕ್ಷತೆಗೆ ನಾನು ವಂದಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಟ್ವೀಟ್‌ ಮಾಡಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದು, ಚಂದ್ರಯಾನ-3 ಮಿಷನ್‌ ಯಶಸ್ವಿ ಉಡಾವಣೆಗಾಗಿ ಇಸ್ರೋಗೆ ಅಭಿನಂದನೆಗಳು. ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲು. ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ