ಅಜಿತ್ ಪವಾರ್ 
ದೇಶ

ಮಹಾರಾಷ್ಟ್ರ: ಡಿಸಿಎಂ ಅಜಿತ್ ಪವಾರ್‌ಗೆ ಹಣಕಾಸು, ಅವರ ತಂಡದ ಎಲ್ಲ ಸಚಿವರಿಗೂ ಖಾತೆ ಹಂಚಿಕೆ

ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಇತ್ತೀಚಿಗಷ್ಟೇ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರಿಗೆ ಹಣಕಾಸು ಖಾತೆಯನ್ನು ನಿಡಲಾಗಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಇತ್ತೀಚಿಗಷ್ಟೇ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರಿಗೆ ಹಣಕಾಸು ಖಾತೆಯನ್ನು ನಿಡಲಾಗಿದೆ.

ಕಳೆದ ಜುಲೈ 2 ರಂದು ಅಜಿತ್ ಪವಾರ್ ಜತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಎನ್‌ಸಿಪಿ ಎಂಟು ಸಚಿವರಿಗೂ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಕಟಣೆ ಪ್ರಕಾರ, ಧನಂಜಯ್ ಮುಂಡೆ ಅವರಿಗೆ ಕೃಷಿ, ದಿಲೀಪ್ ವಾಲ್ಸೆ-ಪಾಟೀಲ್ ಅವರಿಗೆ ಸಹಕಾರ ಖಾತೆ, ಹಸನ್ ಮುಶ್ರಿಫ್ ಅವರಿಗೆ ವೈದ್ಯಕೀಯ ಶಿಕ್ಷಣ, ಛಗನ್ ಭುಜಬಲ್ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಧರ್ಮರಾವ್ ಅತ್ರಮ್ ಅವರಿಗೆ ಆಹಾರ ಮತ್ತು ಔಷಧಗಳ ಆಡಳಿತ, ಸಂಜಯ್ ಬನ್ಸೋಡೆ ಅವರಿಗೆ ಕ್ರೀಡೆ, ಅದಿತಿ ತತ್ಕರೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅನಿಲ್ ಪಾಟೀಲ್ ಅವರಿಗೆ ಪರಿಹಾರ, ಪುನರ್ವಸತಿ ಮತ್ತು ವಿಪತ್ತು ನಿರ್ವಹಣೆ ಖಾತೆ ನೀಡಲಾಗಿದೆ.

9 ಎನ್‌ಸಿಪಿ ಸಚಿವರ ಸೇರ್ಪಡೆಯೊಂದಿಗೆ ಮಹಾರಾಷ್ಟ್ರ ಸಚಿವ ಸಂಪುಟದಲ್ಲಿ 29 ಕ್ಯಾಬಿನೆಟ್ ಮಂತ್ರಿಗಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ